ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸ್ವಂತ ಮಕ್ಕಳಂತೆ ಪಾಲನೆ ಮಾಡಿ

Mainashree
Updated On : 22 Jun 2014, 11:46 am

ಚಿಕ್ಕಬಳ್ಳಾಪುರ: ಮಕ್ಕಳನ್ನು ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಸ್ವಂತ ಮಕ್ಕಳಂತೆ ಪ್ರೀತಿಯಿಂದ ನೋಡಿಕೊಳ್ಳಬೇಕೆಂದು ಶಾಸಕ ಡಾ.ಕೆ.ಸುಧಾಕರ್  ತಿಳಿಸಿದರು.  
ತಾಲೂಕಿನ ಕೊಂಡೇನಹಳ್ಳಿಯಲ್ಲಿ 4.18 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ಅಂಗನವಾಡಿ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಅಂಗನವಾಡಿ ಕೇಂದ್ರದ ಮಕ್ಕಳಿಗಾಗಿ ಸರ್ಕಾರ ಹಾಲು, ಮೊಟ್ಟೆ ಪೌಷ್ಟಿಕ ಆಹಾರವನ್ನು ವಿತರಿಸುತ್ತಿದೆ. ಇದರಿಂದ ಮಕ್ಕಳ ಆರೋಗ್ಯದಲ್ಲಿ ಸುಧಾರಣೆಯೂ ಕಂಡು ಬರುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳ ಆರೋಗ್ಯವನ್ನು ಕಾಪಾಡುವುದರಿಂದ ಉತ್ತಮ ಬೆಳವಣಿಗೆಯಾಗುತ್ತದೆ. ಇದರಿಂದ ಅಪೌಷ್ಟಿಕ ಸಮಸ್ಯೆ ದೂರ ಮಾಡಲು ಶ್ರಮಿಸಬೇಕಾಗಿದೆ. ಇದನ್ನು ಪೋಷಕರು ಪ್ರಮುಖ ಜವಾಬ್ದಾರಿಯನ್ನಾಗಿ ತೆಗೆದುಕೊಂಡು ಮಕ್ಕಳನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರನ್ನಾಗಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ತಾ.ಪಂ. ಅಧ್ಯಕ್ಷ ಕೃಷ್ಣಮೂರ್ತಿ, ಮುಖಂಡರಾದ ಕಣಿತಹಳ್ಳಿ ವೆಂಕಟೇಶ್, ಕೃಷ್ಣಮತೂರ್ತಿ, ರಾಮಸ್ವಾಮಿ, ಎಸ್.ಕೆ.ದ್ಯಾವಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮರಾಜ ಅರಸು, ನಾರಾಯಣಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement