ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಿಲಿಂಡರ್ ಸ್ಫೋಟ: ಯುವಕನಿಗೆ ಗಾಯ

Mainashree
Updated On : 27 Jun 2014, 12:31 pm

ಮಾಲೂರು: ಕೊಠಡಿವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಯುವಕನೊಬ್ಬ ತೀವ್ರವಾಗಿ ಗಾಯಗೊಂಡ ಘಟನೆ ಪಟ್ಟಣದ ಗಾಂಧಿ ವೃತ್ತದ ಬಳಿ ಗುರುವಾರ ನಡೆದಿದೆ.
ಪಟ್ಟಣದ ಗಾಂಧಿ ವೃತ್ತದ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಶಿರಡಿ ಸಾಯಿಬಾಬಾ ದೇವಾಲಯದ ಸಮೀಪದ ದಾಸ್ತಾನು ಕೊಠಡಿಯಲ್ಲಿ ಈ ಘಟನೆ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿರುವ ನವೀನ್ ಕುಮಾರ್(22)ನನ್ನು ಹೊಸಕೋಟೆ ಎಂವಿಜೆ ಆಸ್ವತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಮೇಲ್ಚಾವಣಿ ಹಾರಿ ಹೋಗಿದ್ದು, ನವೀನ್ ಕುಮಾರ್‌ನ ಮುಖ ಹಾಗೂ ಕೈಗಳು ಸುಟ್ಟುಹೋಗಿದೆ. ಈ ಕೊಠಡಿಯಲ್ಲಿ ವಿವಿಧ ಕಂಪನಿಗಳು ಸಿಲಿಂಡರ್‌ಗಳನ್ನು ದಾಸ್ತಾನು ಮಾಡಿ ಅಕ್ರಮವಾಗಿ ಗ್ಯಾಸ್ ಫೀಲಿಂಗ್ ದಂಧೆ ನಡೆಸಲಾಗುತ್ತಿತ್ತು ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement