ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಮಹಾಪೂರ
ಚಿಕ್ಕಬಳ್ಳಾಪುರ: ತಾಲೂಕಿನ ಪೋಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದ ಜನಸ್ಪಂದನದಲ್ಲಿ ಗ್ರಾಮಸ್ಥರು ಸಮಸ್ಯೆಗಳ ಸುರಿಮಳೆಗೈದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಅಹವಾಲು ಸ್ವೀಕರಿಸಿ ತ್ವರಿತವಾಗಿ ಬಗೆಹರಿಸಬೇಕೆಂದು ಒತ್ತಾಯಿಸಿದರು. ಗ್ರಾಪಂ ಅಧ್ಯಕ್ಷರೆ ಸಮಸ್ಯೆಗಳ ಸರಮಾಲೆಗೆ ಅಸಮಾಧಾನ ವ್ಯಕ್ತಪಡಿಸಿದರು. ಶಾಸಕ ಕೆ. ಸುಧಾಕರ್ ಗೈರು ಹಾಜರಿಯಿಂದ ಜನಸ್ಪಂದನ ತಾಪಂ ಅಧ್ಯಕ್ಷ ಕೃಷ್ಣಮೂರ್ತಿ ನೇತೃತ್ವದಲ್ಲಿ ಜನರಿಂದ ಅಹವಾಲು ಸ್ವೀಕರಿಸಲಾಯಿತು. ತೋಟಗಾರಿಕೆ ಇಲಾಖೆಯಲ್ಲಿ ಉದ್ಯೋಗಖಾತ್ರಿ ಯೋಜನೆಯಡಿ ಫಲಾನುಭವಿಗಳನ್ನು ಸಮರ್ಪಕವಾಗಿ ಆಯ್ಕೆ ಮಾಡುತ್ತಿಲ್ಲ ಎನ್ನುವುದರ ಬಗ್ಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು. ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಅರಣ್ಯ ಮುಂತಾದ ಇಲಾಖೆಗಳ ಕುರಿತು ಚರ್ಚೆ ನಡೆಯಿತು. ತಹಸೀಲ್ದಾರ್ ಜಗದೀಶ್, ತಾಪಂ ಕಾರ್ಯ ನಿರ್ವಹಣಾಧಿಕಾರಿ ಗಿರಿಜಾ ಶಂಕರ್, ಜಿಪಂ ಸದಸ್ಯೆ ಭರಣಿ ವೆಂಕಟೇಶ್ ಇದ್ದರು.