ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನೂತನ ಬಸ್ ನಿಲ್ದಾಣಕ್ಕೆ ಸ್ಥಳ ಪರಿಶೀಲನೆ: ಶಾಸಕ ಕೆ.ಎಸ್.ಮಂಜುನಾಥ್‌ಗೌಡ

Mainashree
Updated On : 30 Jun 2014, 12:18 pm

ಟೇಕಲ್: ಮಾಲೂರಿನಲ್ಲಿ ನೂತನ ಬಸ್ ನಿಲ್ದಾಣಕ್ಕೆ ಸ್ಥಳ ಪರಿಶೀಲನೆ ಮಾಡಿದ್ದು, ಲೋಕೋಪಯೋಗಿ ಇಲಾಖೆಯಿಂದ ಅನುಮೋದನೆ ನೀಡಲಾಗಿದೆ ಎಂದು ಶಾಸಕ ಕೆ.ಎಸ್.ಮಂಜುನಾಥಗೌಡ ತಿಳಿಸಿದರು. ಟೇಕಲ್‌ನ ಕೊಂಡಶೆಟ್ಟಹಳ್ಳಿ ಗ್ರಾಮದಲ್ಲಿ ಸಹಕಾರ ಸಂಘಗಳು ಹಾಗೂ ಗ್ರಾಮಸ್ಥರು ಏರ್ಪಡಿಸಿದ್ದ ಕೋಚಿಮುವ್ ನಿರ್ದೇಶಕ ಕೆ.ವೈ.ನಂಜೇಗೌಡ ಹಾಗೂ ಶಾಸಕರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು. ಟೇಕಲ್ ರೇಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಬಳಿ ಚರ್ಚಿಸಿ ಮನವಿ ನೀಡಲಾಗಿದೆ. ತಾಲೂಕಿನ ಎಲ್ಲಾ ಗ್ರಾಪಂಗಳಿಗೆ ಸರ್ಕಾರದಿಂದ ಮನೆಗಳು ದೊರೆತಿದ್ದು, ವಸತಿ ಸಚಿವ ಅಂಬರೀಷ್ ಅವರ ಜತೆ ಮಾತುಕತೆ ನಡೆಸಿದ್ದು, ಇನ್ನೂ ಹೆಚ್ಚಿನ ಮನೆಗಳು ನೀಡುವ ಭರವಸೆ ನೀಡಿದ್ದಾರೆ. ಸನ್ಮಾನ ಸ್ವೀಕರಿಸಿ ಮಾತನಾಡಿದ ನಂಜೇಗೌಡ ಅವರು, ನಾನು ಮಾಲೂರು ತಾಲೂಕಿನ ನಿರ್ದೇಶಕನಾಗಿ ಒಂದುವರೆ ತಿಂಗಳಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲೆ ಮಾಲೂರು ತಾಲ್ಲೂಕು ಗುಣಮಟ್ಟದ ಹಾಲು ನೀಡುವಲ್ಲಿ ಪ್ರಥಮ ಸ್ಥಾನ ಬಂದಿದೆ. ಕೊಂಡಶೆಟ್ಟಹಳ್ಳಿ ಗ್ರಾಪಂ ವ್ಯಾಪ್ತಿಯ ಕೆಂಪನಹಳ್ಳಿ, ಪನಮಾಕನಹಳ್ಳಿ ನೂತನ ಡೈರಿ ನೀಡುವ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ ಎಂದರು. ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ವಿ. ಚಂದ್ರಶೇಖರಗೌಡ, ಕೃಷಿಕ ಸಮಾಜದ ಅಧ್ಯಕ್ಷ ಎಚ್.ಹನುಮಂತಪ್ಪ ಮಾತನಾಡಿದರು. ಕಾರ್ಯಕ್ರಮದಲ್ಲಿ ವೆಂಕಟೇಶಗೌಡ, ಸಾದತ್ ಉಲ್ಲಾ ಖಾನ್, ಷಫೀವುಲ್ಲಾ (ಚೋಟು), ನಂಜುಂಡಪ್ಪ, ಜಾಕಿರ್,  ಸುಯಲ್ ಬೇಗ್, ಆಪಿಸ್ ಖಾನ್, ಟೇಕಲ್ ಆಂಜಿನಪ್ಪ, ಕ್ಷೇತ್ರೇನಹಳ್ಳಿ ವೆಂಕಟೇಶ್, ಪ್ರಕಾಶ್, ಶ್ರೀನಿವಾಸ್, ಕೆಂಪಣ್ಣ, ಸೀನಪ್ಪ, ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು. ಇದೇ ವೇಳೆ, ಸಾದತ್ ಉಲ್ಲಾ ಖಾನ್ ಅವರನ್ನು ಶಾಸಕ ಕೆ.ಎಸ್.ಮಂಜುನಾಥಗೌಡ ಅಭಿನಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement