ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅಪಘಾತದಲ್ಲಿ ಮಗು ಸಾವು

Mainashree
Updated On : 30 Jun 2014, 11:32 am

ಚಿಂತಾಮಣಿ: ತಾಯಿ ಜೊತೆ ನಡೆದು ಹೋಗುತ್ತಿದ್ದ ಮಗುವಿಗೆ ಬೈಕೊಂದು ಅತಿವೇಗ ಮತ್ತು ಅಜಾಗ್ರತೆಯಿಂದ ಡಿಕ್ಕಿ ಹೊಡೆದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ಬಂದೇನಹಳ್ಳಿ ಗ್ರಾಮದ ಆಂಜನಪ್ಪ ಎಂಬುವರ ಪುತ್ರಿ ಚಂದನ(3) ಮೃ ಬಾಲಕಿಯಾಗಿದ್ದು, ಬೈಕನ್ನು ಸ್ಥಳದಲ್ಲೇ ಬಿಟ್ಟು ಸವಾರ ಪರಾರಿಯಾಗಿದ್ದಾನೆ. ಕೆಂಚಾರ್ಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಪರಿಚಿತ ಶವ ಪತ್ತೆ: ತಾಲೂಕಿನ ಕುರುಟಹಳ್ಳಿ ಗ್ರಾಮದ ಬಸ್ ತಂಗುದಾಣದಲ್ಲಿ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿ ಮಲಗಿದ್ದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುದ್ದಿ ತಿಳಿದ ಗ್ರಾಮಾಂತರ ಠಾಣೆ ಸಹಾಯಕ ಸಬ್‌ಇನ್ಸ್‌ಪೆಕ್ಟರ್ ನಾರಾಯಣಪ್ಪ ಸ್ಥಳಕ್ಕಾಗಮಿಸಿ ಗ್ರಾಮಸ್ಥರ ಸಹಾಯದಿಂದ ಶವವನ್ನು ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಕಳುಸಿಕೊಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement