ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜು.3ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ

Mainashree
Updated On : 30 Jun 2014, 11:33 am

ಕೋಲಾರ: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಜು.3 ರಿಂದ 12ರವರೆಗೂ ನಡೆಯಲಿದೆ. ಜಿಲ್ಲೆಯ 9 ಕೇಂದ್ರಗಳಲ್ಲಿ ಒಟ್ಟು 4243ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಜಿ. ದೊರೆಸ್ವಾಮಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಸಿದ್ಧತೆಗಳ ಕುರಿತಂತೆ ಡಿಸಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಪತ್ರಕರ್ತರಿಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಕಳೆದ ಮಾರ್ಚ್‌ನಲ್ಲಿ ಪಿಯುಸಿ ಪರೀಕ್ಷೆ ಬರೆದು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಈ ಪರೀಕ್ಷೆ ನಡೆಸಲಾಗುತ್ತಿದೆ. ಯಾವುದೇ ಅವ್ಯವಹಾರಗಳು ನಡೆಯದಂತೆ ಮುನ್ನಚ್ಚರಿಕೆಯಾಗಿ ಎಲ್ಲಾ ಕ್ರಮ ಕೈಗೊಳ್ಳಲಾಗಿದೆ. ಕೋಲಾರ ನಗರದಲ್ಲಿ ಮೂರು ಕೇಂದ್ರಗಳಿದ್ದು, ಸರ್ಕಾರಿ ಬಾಲಕರ ಪಿಯು ಕಾಲೇಜಿನಲ್ಲಿ 947 ವಿದ್ಯಾರ್ಥಿಗಳು,  ಬಾಲಕಿಯರ ಪಿಯು ಕಾಲೇಜಿನಲ್ಲಿ 333 ವಿದ್ಯಾರ್ಥಿಗಳು ಹಾಗೂ ನೂತನ ಸರ್ಕಾರಿ ಪಿಯು ಕಾಲೇಜಿನಲ್ಲಿ 400 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಉಳಿದಂತೆ ಬಂಗಾರಪೇಟೆ ಬಾಲಕರ ಪಿಯು ಕಾಲೇಜು ಪರೀಕ್ಷಾ ಕೇಂದ್ರದಲ್ಲಿ-514, ಕೆಜಿಎಫ್‌ನ ಉರಿಗಾಂ ಸರ್ಕಾರಿ ಪಿಯು ಕಾಲೇಜು ಹಾಗೂ ಜೈನ್ ಕಾಲೇಜಿನಲ್ಲಿ 521 ಮಂದಿ, ಮುಳಬಾಗಿಲು ಬಾಲಕರ ಪಿಯು ಕಾಲೇಜಿನಲ್ಲಿ 387, ಶ್ರೀನಿವಾಸಪುರ ಬಾಲಕರ ಪಿಯು ಕಾಲೇಜಿನಲ್ಲಿ 337 ಹಾಗೂ ಮಾಲೂರು ಸರ್ಕಾರಿ ಪಿಯು ಕಾಲೇಜಿನಲ್ಲಿ 804 ಮಂದಿ ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ವಿವರಿಸಿದರು. ಪರೀಕ್ಷೆಯಲ್ಲಿ ಯಾವುದೇ ದುರಾಚಾರಗಳಿಗೆ ಅವಕಾಶವಿಲ್ಲದಂತೆ ಎಚ್ಚರ ವಹಿಸಿರುವ ಪಿಯು ಇಲಾಖೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಜಾಗೃತ ದಳಗಳನ್ನು ರಚಿಸಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement