ಬ್ಲೇಡ್‌ನಿಂದ ಕುಯ್ದು ಕೊಲೆಗೆ ಯತ್ನ
ಕೆಜಿಎಫ್: ಕುಡಿದ ಅಮಲಿನಲ್ಲಿ ವ್ಯಕ್ತಿಯೊಂದಿಗೆ ಜಗಳ ಕಾದು ಬ್ಲೇಡ್‌ನಿಂದ ಹಲ್ಲೆ ನಡೆಸಿರುವ ಘಟನೆ ಸೋಮವಾರ ಸಂಜೆ ರಾಬರ್ಟ್‌ಸನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸ್ ನಿಲ್ದಾಣದ ಕಾಮಗಾರಿ ಕೂಲಿ ಕೆಲಸ ಮಾಡುತ್ತಿದ್ದ ಗೋಪಿ ಜತೆ ಸಂಜಯ ಗಾಂಧಿ ನಗರದ ನಿವಾಸಿಗಳಾದ ಮುರುಗನ್ ಮತ್ತು ವಿಜಿ ಎಂಬುವರು ಬಸ್ ನಿಲ್ದಾಣದ ವೈನ್ ಶಾಪ್‌ನಲ್ಲಿ ಮದ್ಯ ಸೇವಿಸಿ ಕುಡಿದ ಮತ್ತಿನಲ್ಲಿ ವಿನಾಕಾರಣ ಜಗಳ ತೆಗೆದಿದ್ದಾರೆ. ಇಬ್ಬರ ಮಧ್ಯೆ ವಾಗ್ವಾದ ನಡೆಯುತ್ತಿದ್ದಾಗ ಗೋಪಿ ಮೇಲೆ ಹಲ್ಲೆ ನಡೆಸಿ, ಆರೋಪಿಗಳ ಬಳಿಯಿದ್ದ ಒಂದು ಬ್ಲೇಡ್‌ನಿಂದ ಅವರ ಕತ್ತಿಗೆ ಕೊಯ್ದು ಕೊಲೆ ಪ್ರಯತ್ನ ನಡೆಸಿದ್ದಾರೆ. ಬಳಿಕ ಬಸ್ ನಿಲ್ದಾಣದಲ್ಲಿದ್ದ ಸಾರ್ವಜನಿಕರು ಬರುವಷ್ಟರಲ್ಲಿ ಇಬ್ಬರು ಪರಾರಿಯಾಗಿದ್ದಾರೆ. ಗೋಪಿಯನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪೊಲೀಸರು ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.