ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸವಲತ್ತುಗಳು ಸದುಪಯೋಗವಾಗಲಿ

Rashmi Kasaragodu
Updated On : 2 Mar 2014, 1:24 am

ಚಿಕ್ಕಬಳ್ಳಾಪುರ: ಕಾಂಗ್ರೆಸ್ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಹತ್ತರವಾದ ಯೋಜನೆಗಳ ಮೂಲಕ ಉತ್ತಮ ಆಡಳಿತ ನಡೆಸುತ್ತಿದ್ದು, ಸರ್ಕಾರ ನೀಡುವ ಸವಲತ್ತುಗಳನ್ನು ಜನರು ಸಮರ್ಪಕವಾಗಿ ಬಳಕೆ ಮಾಡಿಕೊಂಡಾಗ ಸಾರ್ಥಕತೆ ಬರುತ್ತದೆ ಎಂದು ಶಾಸಕ ಡಾ.ಕೆ. ಸುಧಾಕರ್ ಅಭಿಪ್ರಾಯಪಟ್ಟರು.
ನಗರಸಭೆ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2013-14ನೇ ಸಾಲಿಲ್ಲಿ 154 ಫಲಾನುಭವಿಗಳಿಗೆ ಅಡುಗೆ ಅನಿಲ ಸಿಲಿಂಡರ್ ವಿತರಣೆ ಮಾಡಿ ಅವರು ಮಾತನಾಡಿ, ಎಲ್ಲಾ ವರ್ಗದ ಜನರ ಅಭಿವೃದ್ಧಿ ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ. ಸರ್ವ ಸಮಾನತೆಯ ತತ್ವದ ಆಧಾರದ ಮೇಲೆ ಕಾಂಗ್ರೆಸ್ ಎಲ್ಲಾ ವರ್ಗದ ಜನರ ಹಿತವನ್ನು ಕಾಪಾಡುತ್ತಿದೆ ಎಂದರು. ಅಧಿಕಾರಿಗಳು ಪ್ರಾಮಾಣಿಕವಾಗಿ ಸವಲತ್ತುಗಳನ್ನು ಫಲಾನುಭವಿಗಳಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಸೂಚನೆ ನೀಡಿದರು.
ಅತಿಯಾದ ಸೌಧೆ ಬಳಕೆಯಿಂದ ಪರಿಸರ ಕಲುಷಿತಗೊಳ್ಳುವ ಜತೆಗೆ ಕಾಡು ನಾಶವಾಗುತ್ತಿದೆ. ಇದನ್ನು ತಪ್ಪಿಸಲು ಪರಿಸರ ಸ್ನೇಹಿ ಅನಿಲ ಬಳಕೆ ಅನಿವಾರ್ಯ. ಈ ವಿಷಯದಲ್ಲಿ ಜನ ಹೆಚ್ಚಿಗೆ ಅಡುಗೆ ಅನಿಲ ಸಿಲಿಂಡರ್ ಬಳಕೆ ಮಾಡುವ ಮೂಲಕ ಹಸಿರು ಕ್ರಾಂತಿಗೆ ನಾಂದಿ ಹಾಡಬೇಕೆಂದು ಮನವಿ ಮಾಡಿದರು.
ರಾಜ್ಯ ಹಣಕಾಸು ಆಯೋಗದ ಅಡಿ 16.42 ಕೋಟಿ ರು. ಅನುದಾನ ಬಿಡುಗಡೆ ಆಗಿದ್ದು ಇದರಲ್ಲಿ 8.61 ಕೋಟಿ ರು. ಖರ್ಚು ಮಾಡಲಾಗಿದೆ. ಈ ಮೂಲಕ ನಾವು ಶೇ.71ರಷ್ಟು ಪ್ರಗತಿ ಸಾಧಿಸಿದ್ದೇವೆ ಎಂದರು.
ಶೇ.22.75 ಮೀಸಲಾತಿ ಅಡಿ 108 ಮಂದಿ ಪರಿಶಿಷ್ಟ ಜಾತಿ ಹಾಗೂ ಪಂಗಡ, ಶೇ. 7.25 ಮೀಸಲಾತಿ ಅಡಿ 36 ಮಂದಿ ಬಡವರ್ಗದವರು, ಶೇ. 3 ಮೀಸಲಾತಿ ಅಡಿ 10 ಮಂದಿ ಅಂಗವಿಕಲರೂ ಸೇರಿದಂತೆ ಒಟ್ಟು 154 ಮಂದಿ ಫಲಾನುಭವಿಗಳಿಗೆ ಅಡುಗೆ ಅನಿಲ ಸಿಲಿಂಡರ್ ನೀಡಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತ ಮುನಿಶ್ಯಾಮಪ್ಪ, ನಗರಸಭೆ ಸದಸ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement