ನೇಣು ಬಿಗಿದುಕೊಂಡು ಆತ್ಮಹತ್ಯೆ
ಬಾಗೇಪಲ್ಲಿ: ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ 16ನೇ ವಾರ್ಡಿನಲ್ಲಿ ಶನಿವಾರ ರಾತ್ರಿ ನಡೆದಿದೆ. ಶ್ರೀನಿವಾಸ್(30) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಮೃತ ಶ್ರೀನಿವಾಸ್ ಕೋಲಾರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಈತ ವಾರಕ್ಕೆ ಒಮ್ಮೆ ಮನೆಗೆ ಬಂದು ಹೋಗುತ್ತಿದ್ದ.ಶ್ರೀನಿವಾಸ್ ಮದ್ಯಪಾನ ಮಾಡುತ್ತಿದ್ದ ವಿಚಾರದಲ್ಲಿ ಗಂಡ ಹೆಂಡತಿ ನಡುವೆ ಸಣ್ಣ ಪುಟ್ಟ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಶನಿವಾರ ರಾತ್ರಿ ಮೃತ ಶ್ರೀನಿವಾಸ ಆತನ ಹೆಂಡತಿಯ ಜೊತೆಯಲ್ಲಿಯೇ ಊಟ ಮುಗಿಸಿ ಮಲಗಿದ ನಂತರ ಅಡುಗೆ ಮನೆಯ ಚಾವಾಣಿಯ ಕಬ್ಬಿಣದ ಸರಳಿಗೆ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.