ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಇಂದು ತಾಲೂಕು ಸಾಹಿತ್ಯ ಸಮ್ಮೇಳನ

Srinivasa Murthy VN
Updated On : 4 Mar 2014, 12:56 pm

ಶಿಡ್ಲಘಟ್ಟ: ಮಾ.4 ರಂದು ನಡೆಯುವ 4ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ.
ಸಮ್ಮೇಳನ ಅರ್ಥಪೂರ್ಣವಾಗಿ ನಡೆಸಲು ತೀರ್ಮಾನಿಸಿರುವ ಕನ್ನಡ ಸಾಹಿತ್ಯ ಪರಿಷತ್ ಪೂರ್ವ ಸಿದ್ಧತೆಗಳ ಬಗ್ಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು. ಸಮ್ಮೇಳನ ಪಟ್ಟಣದ ಕೋಟೆ ವೃತ್ತದ ರ್ಸೃರಿ ಬಾಲಕರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದ್ದು, ಬೃಹತ್ ವೇದಿಕೆ ನಿರ್ಮಿಸಲಾಗುವುದು. ಬಸ್ ನಿಲ್ದಾಣದಲ್ಲಿ ಒಂದು ಹಾಗೂ ಸಮ್ಮೇಳನ ನಡೆಯುವ ಕೋಟೆ ವೃತ್ತದಲ್ಲಿ ಬೃಹತ್ ಗಾತ್ರದ ಸ್ವಾಗತ ಕಮಾನು ನಿಲ್ಲಿಸಲಾಗುವುದು ಎಂದು ತಿಳಿಸಿದರು.
ಸಮ್ಮೇಳನಾಧ್ಯಕ್ಷರ ಭಾಷಣಕ್ಕೆ ಸಮಯದ ಕೊರತೆ ಕಾಡದಂತೆ ಹೆಚ್ಚಿನ ಸಮಯ ಮೀಸಲಿರಿಸಲು ಸಮ್ಮೇಳನಾಧ್ಯಕ್ಷರ ಮೆರವಣಿಗೆ ಮೊಟಕುಗೊಳಿಸಲಾಗುವುದು. ಬಸ್ ನಿಲ್ದಾಣದಿಂದ ಸಮ್ಮೇಳನ ನಡೆಯುವ ಕೋಟೆ ವೃತ್ತದವರೆಗೂ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ತಮಟೆ ವಾದ್ಯ, ಕೀಲು ಕುದುರೆ, ಗಾರುಡಿ ಗೊಂಬೆಗಳ ತಂಡ, ಡೊಳ್ಳುಕುಣಿತ ಹೆಜ್ಜೆ ಹಾಕಲಿವೆ ಎಂದರು. ಬೆಳಗ್ಗೆ 8.30ಕ್ಕೆ ಧ್ವಜಾರೋಹಣದೊಂದಿಗೆ ಆರಂಭವಾಗುವ ಸಮ್ಮೇಳನದಲ್ಲಿ ತಾಯಿ ಭುವನೇಶ್ವರಿ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಉದ್ಘಾಟನಾ ಸಮಾರಂಭ, ನೀರಾವರಿ ಸ್ಥಿತಿಗತಿ ಕುರಿತು ಗೋಷ್ಠಿ ಹಾಗೂ ನಂತರ ಕವಿಗೋಷ್ಠಿ ನಡೆಯಲಿದೆ. ಕವಿಗೋಷ್ಠಿ ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮಾಡಲಾಗುವುದು.
ಕಾರ್ಯಕ್ರಮದ ಯಶಸ್ವಿಗಾಗಿ ಸ್ವಾಗತ ಸಮಿತಿ ಸೇರಿದಂತೆ ವೇದಿಕೆ ಸಮಿತಿ, ಆಹಾರ ಸಮಿತಿ, ಮೆರವಣಿಗೆ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ನಿರ್ವಹಣಾ ಸಮಿತಿ ರಚಿಸಲಾಗಿದೆ. ಸಮ್ಮೇಳನದಲ್ಲಿ ಪಾಲ್ಗೊಂಡು ಹೆಸರನ್ನು ನೋಂದಾಯಿಸುವ ಶಿಕ್ಷಕರಿಗೆ ಸಮ್ಮೇಳನದ ಕೊನೆಯ ವೇಳೆಗೆ ಒಒಡಿ ಪತ್ರ ನೀಡಲಾಗುವುದು. ವಿವಿಧ ಕನ್ನಡ ಪರ ಸಂಘಟನೆಗಳು, ಪ್ರಗತಿ ಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ಸರಕಾರಿ ನೌಕರರು, ಕನ್ನಡ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮ್ಮೇಳನವನ್ನು ಯಶಸ್ವಿಯಾಗಿಸಲು ಅವರು ಕೋರಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿ. ಕೃಷ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement