ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನೂತನ ಪ್ರವಾಸಿ ಮಂದಿರಕ್ಕೆ ಶಂಕುಸ್ಥಾಪನೆ

Vishwanath S
Updated On : 6 Mar 2014, 12:52 pm

ಚಿಕ್ಕಬಳ್ಳಾಪುರ: ತಾಲೂಕಿನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ಬಸ್ ನಿಲ್ದಾಣದ ಸುಮಾರು 8 ಕೋಟಿ ರು.ಗಳ ಕಾಮಗಾರಿ ಹಾಗೂ ಚದಲಪುರದ ಬಳಿ ಸುಮಾರು 2 ಎಕರೆ ಪ್ರದೇಶದಲ್ಲಿ 4 ಕೋಟಿ ರು.ಗಳ ವೆಚ್ಚದಲ್ಲಿ ಪ್ರವಾಸಿ ಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಡಾ.ಕೆ. ಸುಧಾಕರ್ ತಿಳಿಸಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಮತ್ತು ನಗರಸಭೆ, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಚಿಕ್ಕಬಳ್ಳಾಪುರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ನಗರೋತ್ಥಾನ ಒಂದನೇ ಹಂತದ ಯೋಜನೆಯಡಿ ಐಡಿಎಸ್‌ಎಂಡಿ ನಿಧಿ ಮತ್ತು ಜಕ್ಕಲಮಡಗು ಅನುಪಯುಕ್ತ ಸಾಮಗ್ರಿಗಳ ಹರಾಜು ಮೊತ್ತದಿಂದ ನೂತನವಾಗಿ ನಿರ್ಮಿಸಿರುವ ಚಿಕ್ಕಬಳ್ಳಾಪುರ ಬಸ್ ನಿಲ್ದಾಣ ಮತ್ತು ವಾಣಿಜ್ಯ ಮಳಿಗೆಗಳ ಹಾಗೂ ನೂತನ ಪ್ರವಾಸಿ ಮಂದಿರದ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳು ಚಿಕ್ಕಬಳ್ಳಾಪುರದಲ್ಲಿ 13 ಸಾವಿರ ಕೋಟಿ ರು. ಯೋಜನೆಯಾದ ಎತ್ತಿನಹೊಳೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿದರು. ಇದರಿಂದ ಸ್ವಲ್ಪಮಟ್ಟಿಗೆ ನೀರಿನ ಸಮಸ್ಯೆ ಬಗ್ಗೆ ದೂರುವಾಗಿದ್ದು, ಸುಮಾರು 15 ಕೋಟಿ ವೆಚ್ಚದಲ್ಲಿ ಜಕ್ಕಲಮಡುಗಿನಿಂದ ಪೈಪ್ ಲೈನ್ ಮೂಲಕ ನೀರು ತರುವ ಕಾಮಗಾರಿ ಪೂರ್ಣಗೊಂಡಿದೆ ಎಂದರು.
ನಗರದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ ಬಸ್ಸುಗಳು ನಿಲುಗಡೆ ಮಾಡಲು ಸೂಕ್ತ ವ್ಯವಸ್ಥೆ, 49 ಅಂಗಡಿ ಮಳಿಗೆಗಳು, ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗುವುದು. ಚದಲಪುರ ಗ್ರಾಮದಲ್ಲಿ 4 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಪ್ರವಾಸಿ ಮಂದಿರ ನಿರ್ಮಿಸಲಾಗುತ್ತಿದೆ.
ಚಿಕ್ಕಬಳ್ಳಾಪುರ ನಗರ ಇತ್ತೀಚಿನ ದಿನಗಳಲ್ಲಿ ಪ್ರಗತಿ ಹೊಂದುತ್ತಿದ್ದು ಈ ನಿಟ್ಟಿನಲ್ಲಿ ಒಂದು ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ಅವಶ್ಯಕತೆಯಿದೆ. ಸದ್ಯದಲ್ಲೇ ಅದು ಮಂಜೂರಾಗುವ ನಿರೀಕ್ಷೆಯಿದೆ ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತ ಮುನಿಶಾಮಪ್ಪ, ತಹಸೀಲ್ದಾರ್ ನಟೇಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ನಾಗರಾಜಶೆಟ್ಟಿ, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಮುರಳೀಧರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement