ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬಿಜಿಎಸ್ ಶಾಲೆ: ಎಲ್‌ಕೆಜಿ ವಿದ್ಯಾರ್ಥಿಗಳಿಗೆ ಪುರಸ್ಕಾರ

Vishwanath S
Updated On : 6 Mar 2014, 12:52 pm

ಚಿಕ್ಕಬಳ್ಳಾಪುರ: ಎಲ್ಲೆಡೆ ಉನ್ನತ ವ್ಯಾಸಂಗ ಮಾಡಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಗ್ರಾಜ್ಯುಯೇಷನ್ (ಪದವಿ ಪ್ರದಾನ) ನೀಡಿ ಗೌರವಿಸುವುದು ಸಾಮಾನ್ಯ. ಆದರೆ, ಇಲ್ಲಿ ಪುಟಾಣಿ ಎಲ್‌ಕೆಜಿ ವಿದ್ಯಾರ್ಥಿಗಳಿಗೆ ಗ್ರಾಜ್ಯುಯೇಷನ್(ಘಟಿಕೋತ್ಸವ) ನೀಡಿ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಮೂಲಕ ಗಮನ ಸೆಳೆಯಲಾಯಿತು.
ಇಂತಹ ಅಪರೂಪದ ಕಾರ್ಯಕ್ರಮ ನಗರದ ಹೊರ ವಲಯದಲ್ಲಿರುವ ಅಗಲಗುರ್ಕಿ ಬಿಜಿಎಸ್ ಅಂಗ್ಲ ಶಾಲೆಯಲ್ಲಿ ಮಂಗಳವಾರ ನಡೆಯಿತು.
 ಅಲ್ಲದೇ ಹಿರಿಯರ ಮಾರ್ಗದರ್ಶನದಲ್ಲಿ ಪುಟಾಣಿ ವಿದ್ಯಾರ್ಥಿಗಳು ತಯಾರಿಸಿದ್ದ ಆಕರ್ಷಕ ನಾನಾ ರೀತಿಯ ಕಲಾಕೃತಿಗಳನ್ನು ಪ್ರದರ್ಶಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಅದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಸ್ವತಃ ಮಕ್ಕಳ ಪ್ರತಿಭೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದಲ್ಲದೇ ಅವರಲ್ಲಿ ಮಾನವೀಯ ಮೌಲ್ಯಗಳು, ಶಿಸ್ತು ಸಂಯಮ ಸೇರಿದಂತೆ ಒಳ್ಳೆಯ ಗುಣಗಳನ್ನು ಬೆಳೆಸಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವ ಜವಾಬ್ದಾರಿಯನ್ನು ಪೋಷಕರು ಮತ್ತು  ಶಿಕ್ಷಕರು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು. ಪ್ರತಿಯೊಬ್ಬ ಮಗುವಿನಲ್ಲೂ ಪ್ರತಿಭೆ ಇರುತ್ತದೆ. ಆದರೆ, ಅದನ್ನು ಸರಿಯಾದ ಸಮಯದಲ್ಲಿ ಗುರುತಿಸುವ, ಜೊತೆಗೆ ಪ್ರೋತ್ಸಾಹಿಸುವ ಕೆಲಸವಾಗಬೇಕು. ಆಗ ಮಾತ್ರ ಮಕ್ಕಳು ದೊಡ್ಡವರಾಗಿ ಒಳ್ಳೆಯ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಅದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ, ಪ್ರೊ. ಶಿವರಾಮರೆಡ್ಡಿ, ಜಿ.ಆರ್. ನಾರಾಯಣಸ್ವಾಮಿ ಇದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement