ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಶಾಂತಿಯುತ ಚುನಾವಣೆಗಾಗಿ ಜಿಲ್ಲಾಡಳಿತ ಸಜ್ಜು

Vishwanath S
Updated On : 8 Mar 2014, 1:31 am

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಈಗಾಗಲೇ ಜಾರಿಗೆ ಬಂದಿದ್ದು ಲೋಪದೋಷಗಳಿಗೆ ಎಡೆ ಯಿಲ್ಲದಂತೆ ಶಾಂತಿಯುತವಾಗಿ ಚುನಾವಣೆ ಮುಗಿಸಲು ಜಿಲ್ಲಾಡಳಿತ ಸಿದ್ಧತೆಯಲ್ಲಿ ನಿರತವಾಗಿದೆ.
ಮಾ.19 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಮಾ.26 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ, ಮಾ.27 ರಂದು ನಾಮಪತ್ರಗಳ ಪರಿಶೀಲನೆ, ಮಾ.29 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ, ಏ.17 ರಂದು ಮತದಾನ, ಮೇ 16 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಿಶ್ರಣವಾಗಿದ್ದು ಚಿಕ್ಕಬಳ್ಳಾಪುರ, ಗೌರಿಬಿದನೂರು, ಬಾಗೇಪಲ್ಲಿ (ಚಿಕ್ಕಬಳ್ಳಾಪುರ ಜಿಲ್ಲೆ), ಯಲಹಂಕ (ಬೆಂಗಳೂರು ನಗರ ಜಿಲ್ಲೆ), ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ (ಬೆಂಗಳೂರು ಗ್ರಾಮಾಂತರ ಜಿಲ್ಲೆ) ಸೇರಿದಂತೆ 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.
ಈಗಾಗಲೇ 8 ವಿಧಾನಸಭಾ ಕ್ಷೇತ್ರಗಳ ಮತದಾರ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಮತದಾರರು ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎನ್ನುವುದನ್ನು ಮಾ.9 ರಂದು ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳ ಬಳಿಗೆ ಹೋಗಿ ಖಾತ್ರಿ ಪಡಿಸಿಕೊಳ್ಳಬಹುದು. ಇಲ್ಲದಿದ್ದಲ್ಲಿ ಚುನಾವಣಾ ಆಯೋಗದ ವೆಬ್ ಸೈಟ್ (ಢಿಢಿಢಿ.್ಛಜ್ಟ್ಞಛ್ಠಟಿಛಡಿಛ್ಞಛ.ಟ್ಝ್ಛಿ.್ಝಟಿ) ನಲ್ಲಿ ಮಾಹಿತಿ ಪಡೆಯಬಹುದಾಗಿದ್ದು, ವಾಸ, ವಿಳಾಸ, ವಯಸ್ಸಿನ ದೃಢೀಕರಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ನಮೂನೆ 6 ರೊಂದಿಗೆ ನೀಡಿ ಹೊಸದಾಗಿ ಮತದಾರ ಪಟ್ಟಿಗೆ ತಮ್ಮ ಹೆಸರನ್ನು ಸೇರಿಸಲು ಮಾ.16 ರವರೆಗೂ ಅವಕಾಶ ನೀಡಲಾಗಿದೆ.
ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 22,67,783 ಜನಸಂಖ್ಯೆಯಿದ್ದು 11,63,355 ಪುರುಷರು ಮತ್ತು 11,04,428 ಮಹಿಳೆಯರಿದ್ದಾರೆ. ಒಟ್ಟು ಜನಸಂಖ್ಯೆಯಲ್ಲಿ 16,01,957 (70.64) ಮತದಾರರಿದ್ದು 8,15,475 (ಶೇ.70.10) ಪುರುಷರು ಮತ್ತು 7,86,482 (ಶೇ.71.21) ಮಹಿಳಾ, ಇತರೆ ಗುಂಪಿನ 67 ಮತದಾರರಿದ್ದಾರೆ. 15,95,617 ಮಂದಿ ಮತದಾರ ಗುರುತಿನ ಚೀಟಿಯನ್ನು ಪಡೆದುಕೊಂಡಿದ್ದು ಶೇ.99.60 ರಷ್ಟು ಎಪಿಕ್ ಕಾರ್ಡನ್ನು ಹೊಸದಾಗಿ ನೀಡುವಲ್ಲಿ ಯಶಸ್ವಿಯಾಗಿದ್ದು ಉಳಿದಂತೆ ಕಳೆದ ಲೋಕಸಭಾ ಚುನಾವಣೆಯಲ್ಲಿದ್ದಂತೆ ಈ ಬಾರಿ ಒಟ್ಟು 2119 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ.
ಕ್ಷೇತ್ರದಲ್ಲಿ ಚುನಾವಣೆ ಶಾಂತಿಯುತ, ಪಾರದರ್ಶಶಕವಾಗಿ ನಡೆಯಲು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ 16 ಮಂದಿ ನೋಡೆಲ್ ಅಧಿಕಾರಿಗಳು ಮತ್ತು ಕೆಎಎಸ್ ದರ್ಜೆಯ 8 ಮಂದಿ ಸಹಾಯಕ ಚುನಾವಣಾಧಿಕಾರಿಗಳು ಮತ್ತು ಕ್ಷೇತ್ರವಾರು 8 ಮಂದಿ ತಹಸೀಲ್ದಾರ್‌ಗಳಿಗೆ ಜವಾಬ್ದಾರಿ ವಹಿಸಲಾಗಿದೆ. ಈಗಾಗಲೇ ಅಧಿಕಾರಿಗಳ ಸಭೆ ಕರೆದು ಚುನಾವಣಾ ಆಯೋಗದ ನಿರ್ದೇಶನದಂತೆ ಕಾರ್ಯ ನಿರ್ವಹಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಇದಕ್ಕೆ ಅನುಗುಣವಾಗಿ ಅಧಿಕಾರಿಗಳು ಚುನಾವಣಾ ಕಾರ್ಯದಲ್ಲಿ ತಲ್ಲೀನರಾಗಿದ್ದಾರೆ. ಇದರ ಜೊತೆಗೆ ರಾಜಕೀಯ ಪಕ್ಷಗಳ ಮುಖಂಡರಿಗೂ ಕಾನೂನು ನಿಯಮಗಳಿಗೆ ವಿರುದ್ಧವಾಗಿ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದ್ದು ಕ್ಷೇತ್ರದೆಲ್ಲೆಡೆ ಅಧಿಕಾರಿಗಳ ತಂಡ ಹದ್ದಿನ ಕಟ್ಟಿದೆ.
ಕ್ಷೇತ್ರವಾರು ವಿವರ
ಕ್ಷೇತ್ರ                           ಮತಗಟ್ಟೆ              ಮತದಾರರು
ಗೌರಿಬಿದನೂರು               253                   190502        
ಬಾಗೇಪಲ್ಲಿ                      251                    178683
ಚಿಕ್ಕಬಳ್ಳಾಪುರ                237                    179810
ಯಲಹಂಕ                      246                    302824
ಹೊಸಕೋಟೆ                   265                   189692
ದೇವನಹಳ್ಳಿ                      274                  187767
ದೊಡ್‌ಡಬಳ್ಳಾಪುರ           250                  186413
ನೆಲಮಂಗಲ                    243                   186266
ಒಟ್ಟು                              2119                 1601957

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement