ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕುಡಿವ ನೀರಿಗೆ ಆಗ್ರಹಿಸಿ ಪ್ರತಿಭಟನೆ

Srinivasa Murthy VN
Updated On : 10 Mar 2014, 11:46 am

ಬಂಗಾರಪೇಟೆ: ಪಟ್ಟಣದಲ್ಲಿ ತಲೆ ದೂರಿರುವ ಕುಡಿವ ನೀರಿನ ಸಮಸ್ಯೆ ನೀಗಿಸುವಲ್ಲಿ ಪುರಸಭೆ ಸಂಪೂರ್ಣವಾಗಿ ವಿಫಲವಾಗಿದ್ದು, ಕೂಡಲೇ  ಸಮರ್ಪಕ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಪುರಸಭೆ ಕಚೇರಿಗೆ ಬೀಗ ಜಡಿದು ದಲಿತ ಸಮಾಜ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪಟ್ಟಣದ ಕೆಲವು ವಾರ್ಡುಗಳಲ್ಲಿ ನಾಲ್ಕು ತಿಂಗಳಿಂದ ನೀರು ಪೂರೈಕೆಯಾಗಿಲ್ಲ ವರ್ಷಕ್ಕೆ ಎರಡು ಮೂರು ಬಾರಿ ಮಾತ್ರ ಕುಡಿವ ನೀರು ಪೂರೈಸುವ ಜಾಯಮಾನವನ್ನು ಪುರಸಭೆ ಮೈಗೂಡಿಸಿಕೊಂಡಿದೆ ಪ್ರತಿಭಟನಾಕಾರರು ಆರೋಪಿಸಿದರು.
ಸಮರ್ಪಕವಾಗಿ ನೀರು ಪೂರೈಸುವವರೆಗೂ ಜಾಗಬಿಟ್ಟು ಕದಲುವುದಿಲ್ಲ ಎಂದು ಅಧಿಕಾರಿಗಳನ್ನು ಕಚೇರಿ ಒಳಗೆ ಇಟ್ಟು ಬೀಗ ಹಾಕಿ ಪ್ರತಿಭಟನೆ ಮಾಡಿದರು.
 ನಂತರ ಅಧಿಕಾರಿಗಳು ವಾರದೊಳಗೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು. ಸಂಘದ ಜಿಲ್ಲಾಧ್ಯಕ್ಷ ಸೂಲಿಕುಂಟೆ ಆನಂದ್, ತಾಲೂಕು ಅಧ್ಯಕ್ಷ ಹುಣಸನಹಳ್ಳಿ ರಮೇಶ್, ದೇವಗಾನಹಳ್ಳಿ ಯತೀಶ್, ಮುನಿಸ್ವಾಮಿ,ರಾಧಾ, ರಾಜೇಶ್, ಸ್ವಾಮಿ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

ನೀತಿ ಸಂಹಿತೆ: ನೇರ ಉಲ್ಲಂಘನೆ
ಶ್ರೀನಿವಾಸಪುರ: ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟಗೊಂಡ
ದಿಢದಿಂದಲೇ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಸರ್ಕಾರಿ ಕಚೇರಿ ಆವರಣಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಬ್ಯಾನರ್ಸ್, ಬಂಟಿಂಗ್ಸ್ ಹಾಗೂ ಫ್ಲೆಕ್ಸ್ ಹಾಕ ಬಾರದೆಂದು ಚುನಾವಣಾ ಆಯೋಗ ಕಟ್ಟುನಿಟ್ಟಿನ ಆದೇಶ ನೀಡುತ್ತಿದ್ದರೂ, ಇಲ್ಲಿನ  ಪುರಸಭೆ ಸಿಬ್ಬಂದಿ ಮಾತ್ರ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿದ್ದಾರೆ.
ಪಟ್ಟಣದ ಲೋಕೋಪಯೋಗಿ ಇಲಾಖೆ  ಕಾಂಪೌಂಡಿನಲ್ಲಿ ಕಾಂಗ್ರೆಸ್‌ಗೆ ಸೇರಿದ ಹಸ್ತದ ಗುರುತಿನ ಬಾವುಟವೊಂದು ನಿರ್ಭಯವಾಗಿ ಹಾರಾಡುತ್ತಿದೆ. ಇನ್ನು ಸರ್ಕಾರಿ ಆಸ್ಪತ್ರೆ ಹೆಬ್ಬಾಗಿಲಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ಖಾದರ್
ಭಾವಚಿತ್ರಗಳಿರುವ ಬ್ಯಾನರ್‌ವೊಂದನ್ನು ಎಲ್ಲರನ್ನು ಬರಮಾಡಿಕೊಳ್ಳುವ ರೀತಿಯಲ್ಲಿ ಕಟ್ಟಿದ್ದಾರೆ. ಇದನ್ನು ಸಂಬಂಧಪಟ್ಟವರು ಗಮನಿಸಿದ್ದರೂ ಜಾಣ ಕುರುಡು ಪ್ರರ್ಶಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನ ಮೂಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement