ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ

Vishwanath S
Updated On : 12 Mar 2014, 1:18 am

ಶಿಡ್ಲಘಟ್ಟ: ದಲಿತರ ಕಾಲೋನಿಗಳಲ್ಲಿ ಅಕ್ರಮವಾಗಿ ಮಾರಾಟಮಾಡುತ್ತಿರುವ ಮದ್ಯವನ್ನು ನಿಲ್ಲಿಸಲು ಸಾಧ್ಯವಾಗದಿದ್ದರೆ ಅಟ್ರಾಸಿಟಿ ಸಭೆಗಳನ್ನು ಏಕೆ ಕರೆಯುತ್ತೀರಿ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸಿ.ಎಂ. ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಗ್ರಾಮಾಂತರ ಠಾಣೆಯಲ್ಲಿ ಏರ್ಪಡಿಸಲಾಗಿದ್ದ ದಲಿತರ ಕುಂದುಕೊರತೆಗಳ ಸಭೆಯಲ್ಲಿ ಮಾತನಾಡಿದ ಅವರು, 'ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ದಲಿತರ ಕಾಲೋನಿಗಳಲ್ಲಿ ಅಕ್ರಮ ಮದ್ಯ ಮಾರಾಟವಾಗುತ್ತಿದೆ. ಈ ಬಗ್ಗೆ ಪ್ರತಿ ಸಭೆಯಲ್ಲೂ ಹೇಳುತ್ತಿದ್ದರೂ ಇದುವರೆಗೂ ಕ್ರಮ ಕೈಗೊಂಡಿಲ್ಲ. ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ಸಭೆಗೆ ಕರೆಸುತ್ತಿಲ್ಲ. ಸರ್ಕಾರಕ್ಕೆ ಲೆಕ್ಕಕೊಡಲು ಮಾತ್ರ  ಸಭೆಗಳನ್ನು ಕರೆಯುತ್ತೀರಿ' ಎಂದು ಪೋಲಿಸ್ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಇದಕ್ಕೆ ಪ್ರತಿಕ್ರಿಯಿಸಿದ ವೃತ್ತ ನಿರೀಕ್ಷಕ ಬಿ.ಎಲ್.ಶ್ರೀನಿವಾಸಮೂರ್ತಿ, 'ಪೋಲಿಸ್ ಠಾಣೆಗೆ ದೂರುಗಳು ಬಂದಾಗ ದಾಖಲು ಮಾಡಲೇ ಬೇಕು. ಅಂಥ ದೂರುಗಳನ್ನು ದಾಖಲು ಮಾಡಿಕೊಂಡ ಮೇಲೆ ವಿಚಾರಣೆ ಮಾಡಿ ಸುಳ್ಳುದೂರುಗಳೆಂದು ಕಂಡು ಬಂದಲ್ಲಿ ಪುನಾ ದೂರುಗಳನ್ನು ನೀಡಿದವರ ಮೇಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗುತ್ತದೆ. ಯಾರ ಮೇಲೆಯೂ ವಿನಾಕಾರಣ ಕೇಸುಗಳನ್ನು ದಾಖಲಿಸುವುದಿಲ್ಲ. ಕೆಲವು ಇಲಾಖೆಗಳಿಗೆ ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಿಕೊಡಲಾಗುತ್ತದೆ. ಸಂಬಂಧಪಟ್ಟ ಇಲಾಖೆಗಳಲ್ಲಿ ಸೂಕ್ತವಾದ ಸ್ಪಂದನೆ ಸಿಗುತ್ತಿಲ್ಲ ಎಂದು ತಮ್ಮ ಅಸಹಾಯಕತೆ ತೋಡಿಕೊಂಡರು.
ಗ್ರಾಮಾಂತರ ಠಾಣೆಯ ಪಿಎಸ್‌ಐ ಪಿ.ಬಿ.ಹನುಮಂತಪ್ಪ, ದಸಂಸ ತಾಲೂಕು ಸಂಚಾಲಕ ಕೆ.ಎಸ್.ದ್ಯಾವಕೃಷ್ಣಪ್ಪ, ದಢಂಘಟ್ಟ ತಿರುಮಲೇಶ್, ಅರುಣುಕಮಾರ್, ತಾತಹಳ್ಳಿ ಚಲಪತಿ, ಚೌಡಸಂದ್ರ ಲಕ್ಷ್ಮೀನಾರಾಯಣ, ಬೈರಗಾನಹಳ್ಳಿ ನಾರಾಯಣಪ್ಪ, ಕಿರಣ್, ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement