60 ಲೀಟರ್ ನಕಲಿ ಮದ್ಯ ವಶ
ಕೋಲಾರ: ಲೋಕಸಭೆ ಚುನಾವಣೆಯಲ್ಲಿ ಮತದಾರರಿಗೆ ಹಂಚಲು ಸಾಗಿಸಲಾಗುತ್ತಿದೆ ಎನ್ನಲಾದ 60 ಲೀಟರ್ ನಕಲಿ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಕೋಲಾರ ತಾಲೂಕಿನ ನರಸಾಪುರ ಬಳಿಯ ಕಾಮತ್ ಹೊಟೇಲ್ ಬಳಿ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಿಂದ ಆಂಧ್ರಕ್ಕೆ ಸಾಗಿಸುತ್ತಿದ್ದ ಮಾಹಿತಿ ಆಧರಿಸಿ ಅಬಕಾರಿ ಇಲಾಖೆಯ ಜಿಲ್ಲಾ ಅಧಿಕಾರಿ ಮುರಳಿ, ಇನ್ಸ್ಪೆಕ್ಟರ್ ಜಯರಾಮ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ.