ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಯುವತಿ ಮೇಲಿನ ದೌರ್ಜನ್ಯ ಖಂಡಿಸಿ ಜನವಾದಿ ಪ್ರತಿಭಟನೆ

Mainashree
Updated On : 18 Mar 2014, 1:07 am

ಕೋಲಾರ: ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ದೌರ್ಜನ್ಯವೆಸಗಿರುವ ಚಾಲಕ, ನಿರ್ವಾಹಕರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸೋಮವಾರ ಜನವಾದಿ ಮಹಿಳಾ ಸಂಘಟನೆ ಹಾಗೂ ಎಸ್‌ಎಫ್‌ಐನಿಂದ ಪ್ರತಿಭಟನೆ ನಡೆಯಿತು.
ರಾಜ್ಯ ರಸ್ತೆ ಸಾರಿಗೆ ಬಸ್‌ನಲ್ಲಿ ಚಾಲಕನಿಂದಲೇ ದೌರ್ಜನ್ಯನಡೆದಿರುವುದು ಅತ್ಯಂತ ಹೇಯ ಕೃತ್ಯ ಎಂದು ಪ್ರತಿಭಟನಾಕಾರರು ಖಂಡಿಸಿದರು. ತ್ವರಿತ ಗತಿಯ ನ್ಯಾಯಾಲಯದಲ್ಲಿ ಒಂದು ತಿಂಗಳೊಳಗೆ ವಿಚಾರಣೆ ಮತ್ತು ಮೂರು ತಿಂಗಳೊಳಗೆ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಮುಸ್ತಾಪ್, ಜೆ.ಎಂ.ಎಸ್ ತಾಲೂಕು ಕಾರ್ಯದರ್ಶಿ ಸುಶೀಲಾ, ರಾಜ್ಯ ಸಮಿತಿ ಸದಸ್ಯ ಸಿ.ಅಮರೇಶ್, ಸದಸ್ಯರಾದ ಗೀತಾ, ಅಂಬಿಕಾ, ಗಾಯಿತ್ರಿ ಮತ್ತಿತರರು ಪ್ರತಿಭಟನೆ ನೇತೃತ್ವವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement