ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸಹಕಾರದಿಂದ ಬಾಲ್ಯ ವಿವಾಹಕ್ಕೆ ತಡೆ ಸಾಧ್ಯ

Mainashree
Updated On : 21 Mar 2014, 12:34 pm

ಬಂಗಾರಪೇಟೆ: ಬಾಲ್ಯ ವಿವಾಹ ತಡೆಗೆ ಸರ್ಕಾರದೊಂದಿಗೆ ಸ್ವಯಂ ಸೇವಾ ಸಂಸ್ಥೆಗಳು ಕೈಜೋಡಿಸಿದಲ್ಲಿ ಅನಿಷ್ಟ ಪದ್ಧತಿ ತಡೆಯಲು ಸಾಧ್ಯ ಎಂದು ಶಿಶು ಅಭಿವೃದ್ಧಿಯೋಜನಾಧಿಕಾರಿ ಸಿ.ವಿ. ರಾಮನ್ ಅಭಿಪ್ರಾಯಪಟ್ಟರು.
ತಾಲೂಕಿನ ಸೂಲಿಕುಂಟೆ ಗ್ರಾಪಂ ವ್ಯಾಪ್ತಿಯ ಮಾಗೇರಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ವಿದ್ಯಾಸಂಸ್ಥೆ, ಫೋಕಸ್ ಸಂಸ್ಥೆ ಮತ್ತು ಕಾಮಧೇನು ಮಹಿಳಾ ಸ್ವ ಸಹಾಯ ಸಂಘದ ಆಶ್ರಯದಲ್ಲಿ ಗುರುವಾರ ಹಮ್ಮಿಕೊಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿ, ಇತ್ತೀಚಿಗೆ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳ ನಡೆಯುತ್ತಿದ್ದರು ಮಹಿಳೆಯರು ಹೋರಾಟ ಮಾಡಲು ಮುಂದೆ ಬರುತ್ತಿಲ್ಲವೆಂದು ವಿಷಾದ ವ್ಯಕ್ತಪಡಿಸಿದರು.
ಸಾಕ್ಷರತಾ ತಾಲೂಕು ಸಂಯೋಜಕ ಸಂಪಂಗಿ, ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಮಾತನಾಡಿ, ಮಹಿಳೆಯರ ಸ್ವಾವಲಂಭನೆಗಾಗಿ ಸರ್ಕಾರ ಸಾಕಷ್ಟು ಅನುದಾನಗ ನೀಡಿದ್ದರೂ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದರು.
ಇದೇ ಸಂದರ್ಭದಲ್ಲಿ ಗ್ರಾಮದ ಶತಾಯುಶಿ ಬೈರಮ್ಮ (ನೂರು ವರ್ಷ) ಅವರನ್ನು ವಿವಿಧ ಗ್ರಾಮಗಳಿಂದ ಬಂಧಿದ್ದ ಮಹಿಳೆಯರು ಸನ್ಮಾನಿಸಿ ಗೌರವಿಸಿದರು. ಸಂಘದ ಎಲ್ಲ ಪ್ರತಿನಿಧಿಗಳಿಗೆ ಅರಿಶಿನ ಕುಂಕುಮ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಶಾರದಮ್ಮ, ಎ. ಹರೀಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement