ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕೋಲಾರದಲ್ಲಿ ಆಮ್ ಆದ್ಮಿ ಖಾತೆ ತೆರೆವುದು ಖಚಿತ

Mainashree
Updated On : 21 Mar 2014, 11:50 am

ಬಂಗಾರಪೇಟೆ: ದೇಶವನ್ನು ಕಾಡುತ್ತಿರುವ ಗಂಡಾಂತರವನ್ನು ತಪ್ಪಿಸಲು ಆಮ್ ಆದ್ಮಿ ಪಕ್ಷ ಸ್ಥಾಪನೆ ಮಾಡಿರುವ ಉದ್ದೇಶವಾಗಿದ್ದು ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಲ್ಲಿ ಖಾತೆ ತೆರೆಯುವುದು ಖಚಿತ ಎಂದು ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಕೋಟಗಾನಹಳ್ಳಿ ರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದಲ್ಲಿರುವ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಮಾತನಾಡುತ್ತಾ ದೇಶದಲ್ಲಿ ಕಾಂಗ್ರೆಸ್ನದುರಾಡಳಿತದಿಂದಾಗಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಇದನ್ನು ನಿಯಂತ್ರಿಸಿ ಜನರಿಗೆ ಭ್ರಷ್ಟಾಚಾರ ಮುಕ್ತಿ ಆಡಳಿತ ನೀಡಲು ದೇಶದಲ್ಲೆಡೆ ಆಮ್ ಆದ್ಮಿ ಪಕ್ಷ ಸ್ಪರ್ದಿಸಿದೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ದೊರಕಿದೆ. ಅದರಂತೆ ಜಿಲ್ಲೆಯಲ್ಲಿ ಸಹ ರಾಷ್ಟ್ರೀಯ ಪಕ್ಷಗಳಿಗೆ ಆಮ್ ಆದ್ಮಿ ಪಕ್ಷ ಪ್ರಬಲ ಪೈಪೋಟಿ ನೀಡಲಿದೆ. 6 ಬಾರಿ ಜಿಲ್ಲೆಯಲ್ಲಿ ಪ್ರತಿನಿಧಿಸಿರುವ ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಜಿಲ್ಲೆ ಅಭಿವೃದ್ಧಿಗಾಗಿ ಏನನ್ನೂ ಮಾಡಿಲ್ಲ. ಚುನಾವಣೆ ಸಮಯದಲ್ಲಿ ಮಾತ್ರ ನೋಟುಗಳನ್ನು ಬಡ ಜನರಿಗೆ ನೀಡಿ ಮತ ಪಡೆಯುತ್ತಿದ್ದರು. ಆದರೆ ಈ ಬಾರಿ ಜನರು ನೋಟಿಗಾಗಿ ಮರಳಾಗುವುದಿಲ್ಲ ಮುನಿಯಪ್ಪ ಮನೆಗೆ ಹೋಗುವುದರಲ್ಲಿ ಅನುಮಾನವಿಲ್ಲ ಎಂದರು.
ಇದೇ 25ರಂದು ನಾಮಪತ್ರ ಸಲ್ಲಿಸಲು ಅಪಾರ ಬೆಂಬಲಿಗರೊಂದಿಗೆ ತೆರಳಿ ಸಲ್ಲಿಸುವುದಾಗಿ ಹೇಳಿದ ರಾಮಯ್ಯ ಜಿಲ್ಲೆಯಲ್ಲಿ ತನ್ನದೇ ಆದ ಮತ ಬ್ಯಾಂಕನ್ನು ಹೊಂದಿದ್ದು ಅದನ್ನು ಯಾರಿಂದಲೂ ಬೇರ್ಪಡಿಸಲು ಸಾದ್ಯವಿಲ್ಲ, ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಜನರು ಈ ಎರಡು ಪಕ್ಷಗಳನ್ನು ದಿಕ್ಕರಿಸಿ ಬದಲಾವಣೆಗಾಗಿ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವರೆಂಬ ವಿಶ್ವಾಸವನ್ನು ವ್ಯಕ್ತಪಡಿಸಿದರಲ್ಲದೆ ಮುಂದೆ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೆ ತಂದೇ ತರುವುದಾಗಿ ಹೇಳಿದರು ಹಾಗೂ ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಲ್ಲಿ ದೊರೆಯುತ್ತಿರುವ ಗುಣ ಮಟ್ಟದ ಶಿಕ್ಷಣವನ್ನು ಜಾರಿಗೆ ತರಲು ಮೊದಲು ಆದ್ಯತೆ ನೀಡುವುದಾಗಿ ತಿಳಿಸಿದರು.
ಈ ವೇಳೆ ಪಕ್ಷದ ಮುಖಂಡರಾದ ಕಳವಂಚಿ ವೆಂಕಟೇಶ್, ಸಾಲಿಮನ್, ರಾಜೇಂದ್ರನ್, ರವಿ, ಕರುಣಾಕರನ್, ಕೃಷ್ಣಮೂರ್ತಿ, ಅಶೋಕರ್ ಜೈನ್, ಹರಿಕೃಷ್ಣ, ಸುರೇಶ್, ಮಂಜುನಾಥ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement