ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜೆಡಿಎಸ್ಗೆ ತೊಂದರೆ ನೀಡಲು ಅಧಿಕಾರ ದುರ್ಬಳಕೆ: ಎಚ್ಡಿಕೆ

Mainashree
Updated On : 21 Mar 2014, 11:50 am

ಕೋಲಾರ: ಲೋಕಸಭಾ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುತ್ತಿರುವ ಪ್ರಬಲ ಅಭ್ಯರ್ಥಿಗಳಿಗೆ ತೊಂದರೆ ನೀಡಲು ಆಡಳಿತಾರೂಢ ಕಾಂಗ್ರೆಸ್ ಪಕ್ಷದವರು ಅಧಿಕಾರಿಗಳನ್ನು ದುಬರ್ಳಕೆ ಮಾಡಿಕೊಳ್ಳುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
ಕೋಲಾರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ. ಕೇಶವ ಅವರ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಉಪಸ್ಥಿತರಿರಲು ಶುಕ್ರವಾರ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಜೆಡಿಎಸ್ ಅಭ್ಯರ್ಥಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಸಿದ್ದಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು. ಕಾಂಗ್ರೆಸ್ ಮುಖಂಡರು ಸೋಲಿನ ಭಯದಿಂದ ಸಿದ್ದಯ್ಯನವರನ್ನು ಕ್ಷೇತ್ರದಿಂದ ಓಡಿಸಿದರು ಎಂದು ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಹೆಸರು ಹೇಳದೆ ಟೀಕಿಸಿದರು.
ಕೋಲಾರ ಗಂಡು ಮೆಟ್ಟಿನ ಜಿಲ್ಲೆಯಾಗಿದ್ದು ಈ ಕ್ಷೇತ್ರಕ್ಕೆ ಗಂಡು ಮೆಟ್ಟಿನ ಅಭ್ಯರ್ಥಿಯನ್ನೇ ಕಣಕ್ಕೆ ಇಳಿಸಲು ನಿರ್ಧರಿಸಿ ಕೆ. ಕೇಶವ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಮುಖಂಡರು ಹಾಗೂ ಸರ್ಕಾರ ನಡೆಸುತ್ತಿರುವವರು ಏನೇ ತೊಂದರೆ ನೀಡಿದರೂ ಕೇಶವ ಎಲ್ಲವನ್ನೂ ಸಮರ್ಥವಾಗಿ ಎದುರಿಸಿ ಚುನಾವಣೆಯಲ್ಲಿ ಗೆದ್ದು ಬರಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು. ಕೇಶವ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆಂದು ಕಾಂಗ್ರೆಸ್ನವರು ಆರೋಪ ಮಾಡುತ್ತಿದ್ದಾರೆ. ಸೋಲಿನ ಭಯದಿಂದ ಹತಾಶರಾಗಿ ಅಧಿಕಾರಿಗಳ ಮೂಲಕ ಜಾತಿ ಪ್ರಮಾಣ ಪತ್ರವನ್ನು ರದ್ದು ಮಾಡಿಸಲು ಯತ್ನಿಸುತ್ತಿದ್ದು ಇದರಲ್ಲಿ ವಿರೋಧಿಗಳಿಗೆ ಜಯ ಸಿಗುವುದಿಲ್ಲ, ಕಾನೂನು ತಿಳುವಳಿಕೆ ಇಲ್ಲದೆ ಅಧಿಕಾರಿಗಳು ಗೊಂದಲ ಸೃಷ್ಟಿಸುತ್ತಿದ್ದಾರೆಂದು ದೂರಿದರು. ಕಾಂಗ್ರೆಸ್ ಮತ್ತು ಬಿಜೆಪಿಯವರು ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳುತ್ತಿದ್ದಾರೆ. ಆ ಎರಡು ಪಕ್ಷಗಳ ಮುಖಂಡರ ರೀತಿ ನಾನು ಉಡಾಫೆಯಾಗಿ ಮಾತನಾಡುವುದಿಲ್ಲ, ನಮ್ಮ ಪಕ್ಷದ ಸಂಘಟನೆ ಹಾಗೂ ಅಭ್ಯರ್ಥಿಗಳ ಸಾಮಾರ್ಥ್ಯವನ್ನು ಆಧರಿಸಿ ಹೇಳುವುದಾದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಕನಿಷ್ಠ 13 ರಿಂದ 14 ಸ್ಥಾನ ಗೆಲ್ಲುವುದು ಖಚಿತವೆಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement