ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕಾಂಗ್ರೆಸ್ ಬೂತ್ ಮಟ್ಟದ ಕಾರ್ಯಕರ್ತರ ಸಭೆ

Rashmi Kasaragodu
Updated On : 24 Mar 2014, 12:41 pm

ಟೇಕಲ್: ದೇಶದ ಸುಭದ್ರ ಆಡಳಿತ ನಡೆಸಲು ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಲು, ಕೆ.ಎಚ್. ಮುನಿಯಪ್ಪರನ್ನು ಗೆಲ್ಲಿಸಲು ಮುಖಂಡರು, ಕಾರ್ಯಕರ್ತರು ಶ್ರಮಿಸುವಂತೆ ಕಾಂಗ್ರೆಸ್ ಮುಖಂಡ ಚನ್ನಕೇಶವ ಹೇಳಿದರು.
ಹೋಬಳಿಯಲ್ಲಿ ಹಮ್ಮಿಕೊಂಡಿದ್ದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಿಜೆಪಿ ಹಾಗೂ ಜೆಡಿಎಸ್‌ನಿಂದ ನೂರಾರು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದು, ಭ್ರಷ್ಟಾಚಾರದ ಆಡಳಿತ ನೀಡಿದ ಬಿಜೆಪಿ 65 ವರ್ಷಗಳು ಕಳೆದರು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.
ಬನಹಳ್ಳಿ, ಕ್ಷೇತ್ರೇನಹಳ್ಳಿ, ಕೊತ್ತೂರು, ಕಣಗಲ, ಗುಂಡ್ಲಹಳ್ಳಿ ಮುಂತಾದ ಕಡೆ ಹಲವರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಕೆಪಿಸಿಸಿ ಕಾರ್ಯದರ್ಶಿ ಎಸ್.ಎನ್. ರಘುನಾಥ್, ತಾಲೂಕು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಮುನಿರಾಜು, ಕೆ.ಎಚ್. ಚನ್ನರಾಯಪ್ಪ,  ಆರ್. ರಾಜಣ್ಣ, ಜೀವಿಕುಮಾರ್, ಟಿ.ಎಂ.ಅಶೋಕ್ ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement