ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪಾರದರ್ಶಕ ಸೇವೆ ನೀಡುವ ಭರವಸೆ

Rashmi Kasaragodu
Updated On : 24 Mar 2014, 12:41 pm

ಕೋಲಾರ: ಜನಸೇವೆಯೇ ಜನಾರ್ದನ ಸೇವೆ ಎಂದು ಭಾವಿಸಿ ತಮ್ಮ ಆಡಳಿತಾವಧಿಯಲ್ಲಿ ಕಪ್ಪುಚುಕ್ಕೆ ಬಾರದಂತೆ ಸಮಾಜ ಸೇವೆಯನ್ನು ಪಾರದರ್ಶಕವಾಗಿ ಮಾಡುವುದಾಗಿ ಕೋಲಾರ ನಗರಸಭೆ ನೂತನ ಅಧ್ಯಕ್ಷ ಬಿ.ಎಂ. ಮುಬಾರಕ್ ಭರವಸೆ ನೀಡಿದರು.
ಜಿಲ್ಲಾ ಭಾರತ ಸೇವಾದಳ  ಕಾರ್ಯಾಲಯದ ಆವರಣದಲ್ಲಿ ಶನಿವಾರ ತಮಗೆ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿ, ಸರಳತೆ, ಶಿಸ್ತು, ಪ್ರಾಮಾಣಿಕತೆಗೆ ಹೆಸರಾಗಿರುವ ಭಾರತ ಸೇವಾದಳದ ಕಾರ್ಯಕರ್ತನಾಗಿ ಸಮಾಜ ಸೇವೆ ಆರಂಭಿಸಿದ ನಾನು ನಿವೃತ್ತ ಶಿಕ್ಷಕರಾಗಿ ತಂದೆಯ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ನಾಯಕನಾಗಿ ಇಂದು ನಗರಸಭೆಯ ಅಧ್ಯಕ್ಷರಾಗಿದ್ದು, ದೊರೆತ ಅವಕಾಶ ಸದುಪಯೋಗ ಪಡಿಸಿಕೊಳ್ಳುವುದಾಗಿ ತಿಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಭಾರತ ಸೇವಾದಳ ಕೇಂದ್ರ ಸಮಿತಿ ಸದಸ್ಯ ಬಿ.ಕೆ. ವೆಂಕಟನಾರಾಯಣ್ ಮಾತನಾಡಿ, ನಗರಸಭಾ ಅಧ್ಯಕ್ಷರು ತಮ್ಮ ಅಧಿಕಾರಾವಧಿಯಲ್ಲಿ ಜಿಲ್ಲಾ ಭಾರತ ಸೇವಾದಳ ಕಚೇರಿಗೆ ನಿವೇಶನ ಮಂಜೂರು ಮಾಡಲು ಅಗತ್ಯ ಸಹಕಾರ ನೀಡಬೇಕಾಗಿದ್ದು ಈ ನಿಟ್ಟಿನಲ್ಲಿ ಕೇಂದ್ರ ಸಮಿತಿಯ ಆರ್ಥಿಕ ನೆರವೂ ನೀಡಲಿದೆ ಎಂದರು. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ. ಶ್ರೀನಿವಾಸ್, ರೋಟರಿ ಅಧ್ಯಕ್ಷ ಗೋಪಾಲಕೃಷ್ಣಗೌಡ, ಭಾರತ ಸೇವಾದಳ ಜಿಲ್ಲಾ ಕಾರ್ಯದರ್ಶಿ ವಿ.ಪಿ. ಸೋಮಶೇಖರ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement