ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮೂಲ ಸೌಕರ್ಯಕ್ಕೆ ಸೂಚನೆ

Rashmi Kasaragodu
Updated On : 24 Mar 2014, 12:42 pm

ಕೋಲಾರ: ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವ ಜಿಲ್ಲೆಯ ಎಲ್ಲಾ 88 ಕೇಂದ್ರಗಳಲ್ಲೂ ಕೊಠಡಿ, ಪೀಠೋಪಕರಣ, ಕುಡಿಯುವ ನೀರು, ಶೌಚಾಲಯ ಸೌಲಭ್ಯಗಳ ಕುರಿತು ಮುಖ್ಯ ಅಧೀಕ್ಷಕರು ನಿಗಾ ವಹಿಸುವುದರ ಜತೆಗೆ ದಕ್ಷತೆ, ಕ್ರಮಬದ್ಧವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ವಿ. ಪದ್ಮನಾಭ್ ಸೂಚನೆ ನೀಡಿದರು.
ನಗರದ ಟಿ. ಚೆನ್ನಯ್ಯ ರಂಗಮಂದಿರದಲ್ಲಿ ಭಾನುವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರ ಸಭೆಯಲ್ಲಿ ಮಾತನಾಡಿ, ಅನಧಿಕೃತ ವ್ಯಕ್ತಿಗಳು, ಆಯಾ ವಿಷಯದ ಶಿಕ್ಷಕರು ಪರೀಕ್ಷಾ ಕೇಂದ್ರಕ್ಕೆ ಬರುವುದನ್ನು ಕಡ್ಡಾಯವಾಗಿ ನಿಷೇದಿಸಿದ್ದು, ಯಾರಾದರೂ ಕಂಡು ಬಂದಲ್ಲಿ ಅದಕ್ಕೆ ಮುಖ್ಯ ಶಿಕ್ಷಕರನ್ನೇ ಹೊಣೆ ಮಾಡುವುದಾಗಿ ಎಚ್ಚರಿಸಿದರು. ಪರೀಕ್ಷಾ ಕೇಂದ್ರದಲ್ಲಿ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಇತರೆ ಎಲ್ಲಾ ಸಿಬ್ಬಂದಿ ಮೊಬೈಲ್ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.
ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯುವ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರೇ ಖುದ್ದು ವಿದ್ಯಾರ್ಥಿಗಳ ನೈಜತೆ ಪರಿಶೀಲಿಸಿ ದೃಢಪಡಿಸಿಕೊಳ್ಳಬೇಕು, ನಕಲಿ ವಿದ್ಯಾರ್ಥಿಗಳಿದ್ದಲ್ಲಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ಶಿಕ್ಷಣಾಧಿಕಾರಿಗಳಾದ ನಾಗೇಂದ್ರಪ್ರಸಾದ್, ಕೆ.ಎಂ. ಜಯರಾಮರೆಡ್ಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement