ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಗೌರಿಬಿದನೂರು ತಾಲೂಕಿನ ಎಲ್ಲ ಕೆರೆಗಳಿಗೆ ನೀರು: ವೀರಪ್ಪ ಮೊಯ್ಲಿ

Rashmi Kasaragodu
Updated On : 25 Mar 2014, 1:34 am

ಗೌರಿಬಿದನೂರು: ಎರಡು ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆ ಜಾರಿಯಾಗಲಿದ್ದು, ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬುವ ಕೆಲಸವಾಗಲಿದೆ ಎಂದು ಕೇಂದ್ರ ಸಚಿವ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರಸ್ ಅಭ್ಯರ್ಥಿ ಎಂ. ವೀರಪ್ಪ ಮೊಯ್ಲಿ ಹೇಳಿದರು.
ತಾಲೂಕಿನ ತೊಂಡೇಬಾವಿ ಹೋಬಳಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. '2009ರಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಜನರು ನನ್ನ ಮೇಲೆ ವಿಶ್ವಾಸವಿಟ್ಟು ನೀಡಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿದ್ದೇನೆ. ಕ್ಷೇತ್ರದ ವ್ಯಾಪ್ತಿಯಲ್ಲಿ ನಾಲ್ಕು ಜನ ಕಾಂಗ್ರೆಸ್ ಶಾಸಕರಿದ್ದು, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕರಾದ ಸುಬ್ಬಾರೆಡ್ಡಿ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಕ್ಷೇತ್ರದೆಲ್ಲಡೆ ಕಾಂಗ್ರೆಸ್ ಪರ ಅಲೆ ಇದೆ. ಮತ್ತೊಮ್ಮೆ ನಾನು ಈ ಭಾಗದ ಜನರ ಆಶೀರ್ವಾದದಿಂದ ಭಾರಿ ಅಂತರದಲ್ಲಿ ಚುನಾವಣೆಯಲ್ಲಿ ಗೆಲ್ಲಲಿದ್ದೇನೆ ಎಂದು ಹೇಳಿದರು.
ಇದಕ್ಕೂ ಮುನ್ನ ಶಾಸಕರಾದ ಎನ್.ಎಚ್. ಶಿವಶಂಕರರೆಡ್ಡಿ ಮಾತನಾಡಿ, 'ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮರುಕ್ಷಣದಲ್ಲೇ ಬಡವರ ಪರವಾದ ಅನ್ನಬಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು. ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆ ಹಾಲು ಉತ್ಪಾದಕರಿಗೆ ನಾಲ್ಕು ರುಪಾಯಿಗಳ ಪ್ರೋತ್ಸಾಹಧನ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಸಾಲ ಮನ್ನಾ ಯೋಜನೆಗಳನ್ನು ಜಾರಿಗೊಳಿಸಲಾಯಿತು' ಎಂದು ಹೇಳಿದರು. ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಅವರು ಅತಿ ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕೆಂದು ಕಾರ್ಯಕರ್ತರಿಗೆ ಇದೇ ವೇಳೆ ಕರೆಕೊಟ್ಟರು.
ಕಾರ್ಯಕ್ರಮದಲ್ಲಿ ತೊಂಡೇಬಾವಿ ಗ್ರಾಪಂ ಅಧ್ಯಕ್ಷ ಜೆ.ಕಾಂತರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಕೆ.ಸತೀಶ್, ಅಬ್ದುಲ್ಲಾ, ಪುರಸಭೆ ಅಧ್ಯಕ್ಷರಾದ ಎಂ. ನರಸಿಂಹಮೂರ್ತಿ, ಜಿಪಂ ಉಪಾಧ್ಯಕ್ಷ ಪಿ.ವಿ.ರಾಘವೇಂದ್ರ ಹನುಮಾನ್, ಏಜಾಜ್ ಅಹ್ಮದ್, ಪ್ರಕಾಶ್ ರೆಡ್ಡಿ, ಸದಸ್ಯರಾದ ಶ್ರೀನಿವಾಸ್,ಅಶ್ವತ್ಥಮ್ಮ, ಗೀತಾಜಯಂದರ್, ಇಸ್ತೂರಿ ಸತೀಶ್, ಬಿ.ಜಿ. ವೇಣುಗೋಪಾಲ್‌ರೆಡ್ಡಿ. ಹನುಮಂತರೆಡ್ಡಿ, ವೇದ ಲವೇಣಿ ವೇಣು, ವೆಂಕಟರಮಣ, ಚಿದಾನಂದಗುಪ್ತ, ಮುನಿರಾಜು ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement