ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಬೃಹತ್ ರ್ಯಾಲಿಗೆ ಬನ್ನಿ: ಜೆಡಿಎಸ್

Rashmi Kasaragodu
Updated On : 25 Mar 2014, 1:34 am

ಚಿಕ್ಕಬಳ್ಳಾಪುರ: ಮಾ.26ರಂದ ಮಾಜಿ ಸಿಎಂ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ಅದಕ್ಕಾಗಿ ಬೃಹತ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಕೆ.ವಿ.ನಾಗರಾಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರ್ಯಾಲಿಯಲ್ಲಿ ಪಕ್ಷದ ರಾಜ್ಯ ಹಿರಿಯ ಮುಖಂಡರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ರ್ಯಾಲಿ ಬಳಿಕ ಕುಮಾರಸ್ವಾಮಿ ಜಿಲ್ಲಾಡಳಿತ ಭವನಕ್ಕೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಸದಸ್ಯ ಮುನೇಗೌಡ, ತಾಪಂ ಅಧ್ಯಕ್ಷ ಕೃಷ್ಣಮೂರ್ತಿ, ಜೆಡಿಎಸ್ ತಾಲೂಕು ಅಧ್ಯಕ್ಷ ಮುನಿರಾಜು, ಮಹಮ್ಮದ್ ರವೂಪ್, ತಾಪಂ ಮಾಜಿ ಉಪಾಧ್ಯಕ್ಷ ರೆಡ್ಡಿ, ವಾಸುದೇವ್, ಶಿವಪ್ಪ, ನಗರಸಭಾ ಸದಸ್ಯರಾದ ಕಿಸಾನ್ ಕೃಷ್ಣಪ್ಪ, ಪಿ.ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement