ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

9ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

Rashmi Kasaragodu
Updated On : 26 Mar 2014, 1:21 am

ಗುಡಿಬಂಡೆ: ತಾಲೂಕಿನ ಬೋಗೇನಹಳ್ಳಿ ಗ್ರಾಮದ ನಿವಾಸಿ ಬಿ.ಎಸ್. ವೆಂಕಟೇಶ್ (14) ಎಂಬ ಬಾಲಕ ಶಾಲೆಗೆ ಸರಿಯಾಗಿ ಹೋಗದೇ ತಪ್ಪಿಸಿಕೊಳ್ಳುತ್ತಿದ್ದ ಕಾರಣ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ನೇಣಿಗೆ ಶರಣಾದ ಘಟನೆ ನಡೆದಿದೆ. ಮೃತ ದುರ್ದೈವಿ ವೆಂಕಟೇಶ್ ಬಾಗೇಪಲ್ಲಿ ಪಟ್ಟಣದ ಸೆವೆನ್ ಹಿಲ್ಸ್ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಇತ್ತೀಚೆಗೆ ಶಾಲೆಗೆ ಹೋಗದೆ ತಪ್ಪಿಸಿಕೊಳ್ಳುತ್ತಿದ್ದನ್ನು ಗಮನಿಸಿದ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ನೊಂದು ಮಂಗಳವಾರ ಮಧ್ಯಾಹ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ವರದಕ್ಷಿಣೆ ಕಿರುಕುಳ; ಗೃಹಿಣಿ ಆತ್ಮಹತ್ಯೆ
ಶಿಡ್ಲಘಟ್ಟ: ವರದಕ್ಷಿಣೆ ಕಿರುಕುಳದಿಂದ ಗೃಹಿಣಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮಿ ಮೃತಪಟ್ಟ ಗೃಹಿಣಿ. ಕುಟುಂಬ ಕಲಹದಿಂದ ಬೇಸತ್ತು ಲಕ್ಷ್ಮಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಗಿ ಸಾರ್ವಜನಿಕರು ತಿಳಿಸಿದ್ದಾರೆ. ಆಕೆಯನ್ನು ತಕ್ಷಣ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದರೂ ಮೃತಪಟ್ಟಿದ್ದಾರೆ. ಮೃತರಿಗೆ 2 ವರ್ಷದ ಹೆಣ್ಣುಮಗು ಮತ್ತು 8 ತಿಂಗಳ ಗಂಡು ಮಗುವಿದ್ದು, ಆಕೆಯ ಗಂಡ ನರೇಶ್ ಟ್ಯಾಕ್ಸಿ ಚಾಲಕ. ಮಾವ ಭೀಮಪ್ಪ ಶಿಡ್ಲಘಟ್ಟದ ಪುರಸಭೆ ನೌಕರ. ಗಂಡ ನರೇಶ್, ಸಹೋದರರಾದ ಮಂಜುನಾಥ್, ಅಣ್ಣಪ್ಪ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಲಕ್ಷ್ಮಿ ಸಹೋದರ ದೂರು ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement