ಜೆಡಿಎಸ್ ಅಭ್ಯರ್ಥಿಗೆ ನೋಟಿಸ್
ಕೋಲಾರ: ಜೆಡಿಎಸ್ ಅಭ್ಯರ್ಥಿ ಕೆ.ಕೇಶವ ಅವರು ಶಂಕರ ಚಾನಲ್ನಲ್ಲಿ ತನ್ನ ಒಡೆತನದ ಮ್ಯಾಕ್ಸ್ವರ್ತ್ ಸಂಸ್ಥೆಯ ಚಟುವಟಿಕೆಗಳ ಕುರಿತು ಪ್ರಸಾರ ಮಾಡಿರುವ ಹಿನ್ನೆಲೆಯಲ್ಲಿ ದೂರು ದಾಖಲು ಆಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್. ಮುನಿಯಪ್ಪ ಅವರು ಮುಳಬಾಗಿಲು ಪಟ್ಟಣದಲ್ಲಿ ಸೋಮವಾರ ಕಾರ್ಯಕರ್ತರ ಸಭೆಯ ನಂತರ ಹಣ ಹಂಚಿಕೆ ಮಾಡಿದ್ದಾರೆಂಬ ಮಾಹಿತಿ ಮೇರೆಗೆ ಜಿಲ್ಲಾ ಚುನಾವಣಾಧಿಕಾರಿಗಳು ಮುಳಬಾಗಿಲು ಕ್ಷೇತ್ರಕ್ಕೆ ನೇಮಿಸಿರುವ ನೋಡೆಲ್ ಅಧಿಕಾರಿಯಿಂದ ಸ್ಪಷ್ಟನೆ ಕೇಳಿದ್ದಾರೆ.