ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜೆಡಿಎಸ್ ಸಭೆ ಇಂದು

Rashmi Kasaragodu
Updated On : 26 Mar 2014, 1:19 am

ಗೌರಿಬಿದನೂರು: ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ಒಕ್ಕಲಿಗ ಕಲ್ಯಾಣ ಮಂಟಪದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಜೆಡಿಎಸ್ ಮುಖಂಡ ಜಯಪಾಲ ರೆಡ್ಡಿ ತಿಳಿಸಿದ್ದಾರೆ. ಈ ಸಭೆಗೆ ತಾಲೂಕಿನ ಜೆಡಿಎಸ್ ಕಾರ್ಯಕರ್ತರು ಆಗಮಿಸುವಂತೆ ಕೋರಿದ್ದಾರೆ.



ಚಿಂತಾಮಣಿ ಕಾಂಗ್ರೆಸ್ ಸಭೆ
ಚಿಂತಾಮಣಿ: ಕಾಂಗ್ರೇಸ್ ಮುಖಂಡರು ಸೇರಿ ಲೋಕಸಭಾ ಚುನಾವಣೆ ಪೂರ್ವ ಸಿದ್ಧತೆಗಳ ಬಗ್ಗೆ ತೆಗೆದುಕೊಳ್ಳುವ ತೀರ್ಮಾನ ಬಗ್ಗೆ ಮಾ.26ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು  ಕಾಂಗ್ರೆಸ್ ಹಿರಿಯ ಮುಖಂಡ ಆನೂರು ಸುಬ್ಬಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಎಲ್ಲಾ ಕಾಂಗ್ರೆಸ್ ಮುಖಂಡರು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ತಪ್ಪದೆ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಬೇಕು ಎಂದು  ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement