ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಟೇಕಲ್: ಕಣ್ಣಿನ ಪೊರೆ ಉಚಿತ ತಪಾಸಣೆ

Rashmi Kasaragodu
Updated On : 26 Mar 2014, 1:21 am

ಟೇಕಲ್: ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಗಳೂರಿನ ದೃಷ್ಟಿ, ಕೋಲಾರ ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ತಾಲೂಕು ಆರೋಗ್ಯ ಅಧಿಕಾರಿಗಳು ಹಾಗೂ ಟೇಕಲ್‌ವೈದ್ಯಾಧಿಕಾರಿಗಳ ಆಶ್ರಯದಲ್ಲಿ ಕಣ್ಣಿನ ಪೊರೆ ಉಚಿತ ತಪಾಸಣೆ ಮತ್ತು ಆಪರೇಷನ್ ಚಿಕಿತ್ಸಾ ಶಿಬಿರ ನಡೆಯಿತು. ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಅರ್ಹರಾದವರನ್ನು ಡಾ. ಸೋಲಂಕಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. 40 ಮಂದಿ ಕಣ್ಣಿನ ತಪಾಸಣೆ ನಡೆಸಲಾಯಿತು.


ಚಿನ್ನಸಂದ್ರದಲ್ಲಿ ಜೂಜು: ಇಬ್ಬರ ಬಂಧನ


ಚಿಂತಾಮಣಿ: ಜೂಜಿನಲ್ಲಿ ತೊಡಗಿದ್ದ ಗುಂಪಿನ ಮೇಲೆ ಪೋಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಹಣ ಮತ್ತು ದ್ವಿಚಕ್ರ ವಾಹನ ವಶಪಡಿಸಿಕೊಂಡ ಘಟನೆ ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಯ ಚಿನ್ನಸಂದ್ರ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಚಿನ್ನಸಂದ್ರ ಗ್ರಾಮದ ಹೊರವಲಯದ ಕೆರೆ ಅಂಗಳದಲ್ಲಿ ಮಂಗಳವಾರ ಬೆಳಿಗ್ಗೆ ಜೂಜಿನಲ್ಲಿ ತೊಡಗಿದ್ದ ಗುಂಪಿನ ಮೇಲೆ ಪೋಲೀಸರು ದಾಳಿ ನಡೆಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement