ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮೊಯ್ಲಿ ನೀಡಿದ್ದು ಹುಸಿ ಭರವಸೆ

Rashmi Kasaragodu
Updated On : 26 Mar 2014, 1:18 am

ಗುಡಿಬಂಡೆ: ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಮನಸ್ಸು ಮಾಡಿದ್ದರೇ ಚಿಕ್ಕಬಳ್ಳಾಪುರ ಕ್ಷೇತ್ರವನ್ನೇ ಮಾದರಿ ಕ್ಷೇತ್ರವನ್ನಾಗಿ ಮಾಡಬಹುದಾಗಿತ್ತು. ಆದರೆ, ಕ್ಷೇತ್ರದ ಜನತೆಗೆ ಅವರು ನೀಡಿದ್ದು ಹುಸಿ ಭರವಸೆಗಳನ್ನು ಮಾತ್ರ ಎಂದು ರಾಷ್ಟ್ರೀಯ ಕಿಸಾನ್ ಮೋರ್ಚಾ ಕಾರ್ಯದರ್ಶಿ ಶಂಕರನಾರಾಯಣ ಪರೋಕ್ಷವಾಗಿ ಆರೋಪಿಸಿದರು.
ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಚಿಕ್ಕಬಳ್ಳಾಪುರ ಕ್ಷೇತ್ರ ಸಾಕಷ್ಟು ನೈಸರ್ಗಿಕ ಸಂಪನ್ಮೂಲಗಳಿಂದ ಕೂಡಿದ್ದರೂ ಸಹ ಕ್ಷೇತ್ರದ ಅಭಿವೃದ್ಧಿ ಅಷ್ಟಕಷ್ಟೆ. ಚುನಾವಣೆಗೂ ಮುನ್ನ ನೀಡಿದ ಭರವಸೆಗಳಲ್ಲಿ ಕನಿಷ್ಠ ಒಂದನ್ನಾದರೂ ಈಡೇರಿಸುವಂಥ ಕನಿಷ್ಠ ಪ್ರಯತ್ನವನ್ನೂ ಮಾಡಲಿಲ್ಲ. ಕ್ಷೇತ್ರದ ಜನತೆಗೆ ಮೋಸ ಮಾಡಲು 5 ವರ್ಷ ಸಾಕಾಗಲಿಲ್ಲ ಎಂದು ಮತ್ತೆ ಚುನಾವಣೆಲ್ಲಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ಆದರೆ, ಮೊಯಲ್ಲಿ ಅವರ ಬುದ್ಧಿ ಅರಿತಿರುವ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ ಅವರು ಈ ಹಿಂದೆ 3 ಬಾರಿ ಸಚಿವರಾಗಿ ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದಾರೆ. ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಲು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಿ.ಎಸ್.ನಾಗರಾಜ್,  ಮುಖಂಡ ಗೂಳೂರು ಲಕ್ಷ್ಮೀನಾರಾಯಣ ಮಾತನಾಡಿದರು. ಈ ವೇಳೆ ಬಿಜೆಪಿ ಪಕ್ಷದ ಮುಖಂಡರಾದ ದೇವರಾಜು, ಮಲ್ಲಿಕಾರ್ಜುನ, ಅಮರೇಶ್ ಸೇರಿದಂತೆ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement