ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕುಡಿವ ನೀರು ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಕಚೇರಿಗೆ ಮುತ್ತಿಗೆ

Rashmi Kasaragodu
Updated On : 27 Mar 2014, 12:59 pm

ಕೆಜಿಎಫ್: ಬೇತಮಂಗಲ ಗ್ರಾಮದಲ್ಲಿ ಕಳೆದ 5 ತಿಂಗಳಿಂದ ನೀರು ಸರಬರಾಜು ಮಂಡಲಿ ವತಿಯಿಂದ ಸರಿಯಾಗಿ ನೀರು ಪೂರೈಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರಿಂದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ ಈಗಾಗಲೇ ಬರಗಾಲದಿಂದ ತತ್ತರಿಸಿರುವ ಜನತೆಗೆ ಕುಡಿಯಲು ನೀರಿಲ್ಲದೆ ಪರದಾಡುವ ಸ್ಥಿತಿ ಉಂಟಾಗಿದೆ.
 ಇಂತಹ ಸಮಯದಲ್ಲಿ ನೀರು ಸರಬರಾಜು ಮಂಡಳಿ ಇಲಾಖೆಯ ಅಧಿಕಾರಿಗಳು ನೀರು ಸಮರ್ಪಕವಾಗಿ ಸರಬರಾಜು ಮಾಡುತ್ತಿಲ್ಲ ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಜಾರಿಕೊಳ್ಳುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.
ಈ ವೇಳೆ ಮಾತನಾಡಿದ ಗ್ರಾಪಂ ಪ್ರಭಾರಿ ಅಧ್ಯಕ್ಷೆ ಪ್ರೇಮಾವತಿ,  ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು, ಜಿಲ್ಲಾಧಿಕಾರಿಗಳು ನೀರಿನ ಸಮಸ್ಯೆಗೆ ರು. 50 ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದಾರೆ.
 ಶಾಸಕಿ ವೈ. ರಾಮಕ್ಕ ಅವರ ನೇತೃತ್ವದಲ್ಲಿ ಕೊಳವೆ ಬಾವಿ ಕೊರೆಸಲಾಗಿದ್ದು ಮೋಟರ್ ಹಾಗೂ ಪೈಪ್‌ಗಳನ್ನು ಅಳವಡಿಸಿ ಕುಡಿಯುವ ನೀರಿನ ಸಮಸ್ಯೆ ಭಗೆಹರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಪ್ರತಿಭಟನೆಯಲ್ಲಿ ಪದ್ಮಮ್ಮ, ಭವಾನಿ, ಗುಂಡಣ್ಣ, ಯತೀಶ್, ಹರಿ, ಕದೀರ್‌ಪಾಷಾ, ನಿಜಾಮ್, ಹರ್ಶಾಬೇಗಂ, ಹಸೀನಾ ನಾಗರಾಜ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement