ಜಾತ್ಯತೀತ ಪಕ್ಷಗಳ ಜತೆ ಸೇರಿ ಸರ್ಕಾರ
ಶಿಡ್ಲಘಟ್ಟ: ಈ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬಾರದಿದಿದ್ದರೆ ಜಾತ್ಯತೀತ ಪಕ್ಷಗಳೊಂದಿಗೆ ಸೇರಿ ಸರ್ಕಾರ ರಚನೆಗೆ ಯತ್ನಿಸಲಾಗುವುದು ಎಂದು ಕೇಂದ್ರ ಸಚಿವ ಹಾಗೂ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಹೇಳಿದರು. ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ರೋಷನ್ಬೇಗ್ ಮಾತನಾಡಿ, 'ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ, ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತಂದಿರುವ ಕಾಂಗ್ರೆಸ್ಪ್‌ಕ್ಷವನ್ನು ಬೆಂಬಲಿಸಿ ದೇಶದಲ್ಲಿ ಆಡಳಿತ ನಡೆಸಲು ಅವಕಾಶ ಮಾಡಿಕೊಡಬೇಕು' ಎಂದರು.
ಮುನಿಯಪ್ಪ ಬಿಜೆಪಿ ಜತೆ ಒಳ ಒಪ್ಪಂದ: ಜೆಡಿಎಸ್ ಆರೋಪ
ಟೇಕಲ್: ಪ್ರತಿ ಚುನಾವಣೆಯಲ್ಲೂ ಅನ್ಯ ಪಕ್ಷಗಳ ಜೊತೆ ಮ್ಯಾಚ್‌ಫಿಕ್ಸಿಂಗ್ ಮಾಡಿಕೊಂಡು ಗೆಲ್ಲುತ್ತಿದ್ದ ಕೆ.ಎಚ್. ಮುನಿಯಪ್ಪನವರಿಗೆ ಈ ಬಾರಿ ಜೆಡಿಎಸ್ ಬಾಗಿಲು ಮುಚ್ಚಿರುವುದರಿಂದ ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಕೇಶವ ಆರೋಪಿಸಿದರು.
ಟೇಕಲ್‌ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಕಾಂಗ್ರೆಸ್ ಭ್ರಷ್ಟಾಚಾರ ಆರೋಪದಡಿ ಜೈಲು ವಾಸ ಅನುಭವಿಸಿದ ಮಾಜಿ ಸಚಿವ ಎಸ್.ಎನ್. ಕೃಷ್ಣಯ್ಯಶೆಟ್ಟಿಯವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿರುವುದರ ಔಚಿತ್ಯವನ್ನು ಪ್ರಶ್ನಿಸಿದರು. ಶಾಸಕ ಮಂಜುನಾಥಗೌಡ ಮಾತನಾಡಿ, 6 ಬಾರಿ ಗೆದ್ದಿರುವ ಕಾಂಗ್ರೆಸ್ ಅಭ್ಯರ್ಥಿ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಏನು ಎಂದು ಪ್ರಶ್ನಿಸಿದರು. ತಾಪಂ ಮಾಜಿ ಅಧ್ಯಕ್ಷ ಕೆ.ವೈ.ನಂಜೇಗೌಡ, ಹೋಬಳಿ ಅಭಿವೃದ್ಧಿ ಬಗ್ಗೆ ತಿಳಿಸಿದರು. ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎಚ್.ವಿ. ಚಂದ್ರಶೇಖರಗೌಡ, ಎಚ್. ಹನುಮಂತಪ್ಪ, ಮುನಿರಾಜು, ಎಸ್.ಜಿ. ರಾಮಮೂರ್ತಿ, ಮುನಿಶಾಮಿಗೌಡ, ಟೇಕಲ್ ಆಂಜಿನಪ್ಪ, ರಾಮಕೃಷ್ಣಪ್ಪ, ತಿಮ್ಮೇಗೌಡ ಇದ್ದರು.