ಸ್ವೀಪ್ ಸಭೆಗೆ ಹಾಜರಾಗಲು ಸೂಚನೆ
ಕೋಲಾರ: ಜಿಲ್ಲೆಯಲ್ಲಿನ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳು ಹಾಗೂ ವೈದ್ಯಕೀಯ ಮತ್ತು ತಾಂತ್ರಿಕ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಮತದಾನದಲ್ಲಿ ಭಾಗವಹಿಸಿ ತಮ್ಮ ಹಕ್ಕನ್ನು ಚಲಾಯಿಸಬೇಕಾಗಿದೆ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಾಗಿದೆ. ಅದಕ್ಕಾಗಿ ಜಿಲ್ಲಾ ಚುನಾವಣೆ ಸ್ವೀಪ್ ಸಮಿತಿ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಅವುಗಳಲ್ಲಿ ಮುಖ್ಯವಾಗಿ ಮಾನವ ಸರಪಳಿ, ಬೈಕ್ ರ್ಯಾಲಿ ಮತ್ತು ಕ್ಯಾಂಡಲ್ ಪರೇಡ್ ಕಾರ್ಯಕ್ರಮಗಳು.
ಈ ಕಾರ್ಯಕ್ರಮಗಳನ್ನು ಏರ್ಪಡಿಸುವ ಬಗ್ಗೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರುಗಳ ಜೊತೆ ಚರ್ಚಿಸಲು ಮಾ.29 ರಂದು ಬೆಳಿಗ್ಗೆ 11ಗಂಟೆಗೆ ಜಿ.ಪಂ. ಸಭಾಂಗಣದಲ್ಲಿ ಜಿ.ಪಂ. ಸಿಇಓ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಆರ್. ವಿನೋತ್ ಪ್ರಿಯ ಅಧ್ಯಕ್ಷತೆಯಲ್ಲಿ ಸಭೆಯನ್ನು ಕರೆಯಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯೋಪಾಧ್ಯಾಯರು ಹಾಗೂ ಪ್ರಾಂಶುಪಾಲರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಗೆ ಹಾಜರಾಗಲು ಪ್ರಕಟಣೆ ತಿಳಿಸಿದೆ.