ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ದಲಿತರ ಮೇಲೆ ಅಧಿಕಾರಗಳ ದೌರ್ಜನ್ಯ ನಿಲ್ಲಲಿ

Rashmi Kasaragodu
Updated On : 28 Mar 2014, 2:21 am

ಚಿಕ್ಕಬಳ್ಳಾಪುರ: ದಲಿತರಿಗಾಗುತ್ತಿರುವ ಅನ್ಯಾಯದ ವಿರುದ್ಧ ದೂರು ಕೊಟ್ಟರೆ ಕ್ರಮ ಕೈಗೊಳ್ಳದ ಅಧಿಕಾರಿಗಳ ವರ್ತನೆಗೆ ಏನು ಹೇಳಬೇಕು ಎಂದು ತಿಂಗಳ ಹಿಂದೆ ಸರ್ಕಾರಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿ ಬಿಡುಗಡೆಯಾದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಕೆ.ಸಿ. ರಾಜಾಕಾಂತ್ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೀನ-ದಲಿತರಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂದರು. ಸಿ.ಜಿ.ಗಂಗಪ್ಪ, ಬಿ.ವಿ.ಆನಂದ್ ಮಾತನಾಡಿದರು. ಗೋಷ್ಠಿಯಲ್ಲಿ ಜಿ.ನಾರಾಯಣಸ್ವಾಮಿ, ಸಿ.ಜಿ. ಗಂಗಪ್ಪ, ಜೈಕುಮಾರ್, ಕರಗಪ್ಪ, ಮುನಿರಾಜು ಇದ್ದರು.
ಉಪ ವಿಭಾಗಾಧಿಕಾರಿ ವರ್ಗಾವಣೆಗೆ ಒತ್ತಾಯ
ಚಿಕ್ಕಬಳ್ಳಾಪುರ: ನಿಸ್ಪಕ್ಷಪಾತವಾಗಿ ಚುನಾವಣೆ ನಡೆಯಲು ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್. ಮುನಿಯಪ್ಪನವರ ಸಂಬಂಧಿಯಾಗಿರುವ ಉಪ ವಿಭಾಗಾಧಿಕಾರಿಗಳನ್ನು ವರ್ಗಾವಣೆ ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಕೆ.ಸಿ. ರಾಜಾಕಾಂತ್ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಜಿಲ್ಲೆಯ ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲೂಕುಗಳು ಸೇರಿವೆ. ಉಪ ವಿಭಾಗಾಧಿಕಾರಿ ಶಾಂತಲಾ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್. ಮುನಿಯಪ್ಪರವರ ಸಂಬಂಧಿ. ಈ ಹಿನ್ನೆಲೆಯಲ್ಲಿ ಅವರು ಕರ್ತವ್ಯದ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿರುವುದರಿಂದ ಶಾಂತಲಾರವರನ್ನು ವರ್ಗಾವಣೆ ಮಾಡಬೇಕು. ಶಾಂತಿಯುತ ಚುನಾವಣೆಗೆ ಸಹಕರಿಸಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement