ಏ.2ರಂದು ಪೊಲೀಸ್ ಧ್ವಜ ದಿನಾಚರಣೆ
ಕೆಜಿಎಫ್: ಏಪ್ರಿಲ್ 2ರಂದು ಬೆಳಗ್ಗೆ 8 ಗಂಟೆಗೆ ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಲು ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿ ಅಜಯ್ ಹಿಲೋರಿ ಹೇಳಿದರು. ದಿನಾಚರಣೆಯಂಗವಾಗಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, '1965 ಏಪ್ರಿಲ್ 2 ರಂದು ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆ ಜಾರಿಗೆ ಬಂದಿದ್ದು, ಈ ದಿನವನ್ನು ಪೊಲೀಸ್ ಧ್ವಜ ದಿನಾಚಾರಣೆಯನ್ನಾಗಿ ಆಚರಿಸಲಾಗುತ್ತದೆ. ಅಲ್ಲದೆ, ಈ ದಿನವನ್ನು ಪೊಲೀಸ್ ಕಲ್ಯಾಣ ದಿನವನ್ನಾಗಿ ಕೂಡ ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದವರನ್ನು ನೆನಸಿ ಅವರ ಕಲ್ಯಾಣದ ಕಡೆಗೆ ಚಿಂತಿಸಲಾಗುತ್ತದೆ. ಆದ್ದರಿಂದ ಈ ವಿಶೇಷ ಕಾರ್ಯಕ್ರಮವನ್ನು ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಅರ್ಥಪೂರ್ಣವಾದ ರೀತಿಯಲ್ಲಿ ಆಚರಿಸಲು ತೀರ್ಮಾನಿಸಲಾಗಿದೆ' ಎಂದು ಅವರು ಹೇಳಿದರು. ಸೇವೆಯಿಂದ ನಿವೃತ್ತರಾಗಲಿರುವ ಹಿರಿಯ ಪಿಎಸ್ಐ ಜಿ.ಮನೋಹರ್ ಅವರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯಲ್ಲಿ ಡಿವೈಎಸ್ಪಿ ಎ.ಕೆ.ವಿವೇಕಾನಂದ, ಸಹಾಯಕ ಆಡಳಿತಾಧಿಕಾರಿ ವಿ.ವಿಶ್ವನಾಥ್, ಎಲ್ಲಾ ಸರ್ಕಲ್ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ಗಳು ಭಾಗವಹಿಸಿದ್ದರು.
ಇಂದು ಯುಗಾದಿ ಕವಿ ಗೋಷ್ಠಿ
ಚನ್ನಪಟ್ಟಣ: ಜಿಲ್ಲಾ ಸಾಹಿತ್ಯ ಪರಿಷತ್ತಿನ ವತಿಯಿಂದ ರಾಮನಗರದ ಎಂ.ಎಚ್. ಸಮೂಹ ಸಂಸ್ಥೆಗಳ ಆವರಣದಲ್ಲಿ ಮಾ.29 ರಂದು ಜಿಲ್ಲಾ ಮಟ್ಟದ ಯುಗಾದಿ ಕವಿ ಗೋಷ್ಟಿ ಹಮ್ಮಿಕೊಂಡಿರುವುದಾಗಿ ಕಸಾಪ ಜಿಲ್ಲಾಗೌರವ ಕಾರ್ಯದರ್ಶಿ ಸಿ.ರಾಜಶೇಖರ್ ತಿಳಿಸಿದ್ದಾರೆ. ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ.ಟಿ.ನಾಗೇಶ್ ಆಶಯನುಡಿಗಳನ್ನಾಡಲಿದ್ದು, ಜಿಲ್ಲಾ ಅಥ್ಲೆಟಿಕ್ ಅಸೋಷಿಯೇಷನ್ ಅಧ್ಯಕ್ಷ ಎಲ್. ಚಂದ್ರಶೇಖರ್ ಉದ್ಘಾಟಿಸಲಿದ್ದಾರೆ. ಸಹಾಯಕ ಪ್ರಾಧ್ಯಾಪಕ ವಿ.ಎಚ್. ರಾಜಶೇಖರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಚಂದ್ರಶೇಖರ್, ಶಿವಲಿಂಗೇಗೌಡ, ಗುತ್ತಿಗೆದಾರ ಲಕ್ಷ್ಮೀಕಾಂತ, ಸಮಾಜಸೇವಕ ದೊರೆಸ್ವಾಮಿ , ಪರಿಷತ್ತಿನ ತಾಲೂಕು ಅಧ್ಯಕ್ಷರಾದ ಚನ್ನಪಟ್ಟಣದ ಶಿವಮಾದು, ಕನಕಪುರ ಶಿವಲಿಂಗಯ್ಯ, ಮಾಗಡಿ ಗಂ.ದಯಾನಂದ್, ರಾಮನಗರದ ಬಿ.ಟಿ. ದಿನೇಶ್ ಇನ್ನೂ ಮುಂತಾದವರು ಉಪಸ್ಥಿತರಿರಲಿದ್ದು, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಚಲುವರಾಜುಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.
ಕೌಶಲ್ಯತಾ ತರಬೇತಿ
ಚನ್ನಪಟ್ಟಣ: ತಾಲೂಕಿನ ಗೌಡಗೆರೆ ಗ್ರಾಮದ ಚಾಮುಂಡೇಶ್ವರಿ ಬಸವಪ್ಪ ಚಾರಿಟಬಲ್ ಟ್ರಸ್ಟ್ವತಿಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಹಾಗೂ ಯುವಜನರಿಗೆ ವೃತ್ತಿ ಕೌಶಲ್ಯತಾ ತರಬೇತಿಯನ್ನು ಹಮ್ಮಿ ಕೊಂಡಿರುವುದಾಗಿ ಟ್ರಸ್ಟ್ನ ಬಿ.ಜಿ. ಬಾಬು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9141659029, 9964676625ಗೆ ಸಂಪರ್ಕಿಸುವಂತೆ ತಿಳಿಸಿರುವ ಅವರು, ತರಬೇತಿಗೆ ಹೆಸರು ನೋಂದಾಯಿಸಲು ಏ.14 ಕೊನೆಯ ದಿನವಾಗಿರುತ್ತದೆ.
ನಾಳೆ ಚರ್ಚಾಗೋಷ್ಠಿ
ಚನ್ನಪಟ್ಟಣ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಯುಗಾದಿ ಹಬ್ಬದ ಪ್ರಯುಕ್ತ ಕನ್ನಡ ಭಾಷೆಗೆ ಒದಗಿರುವ ಅಪಾಯಗಳನ್ನು ಎದುರಿಸುವ ಬಗೆ ಹೇಗೆ ಎಂಬ ವಿಷಯವನ್ನು ಕುರಿತು ಚರ್ಚಾಗೋಷ್ಠಿಯನ್ನು ಮಾ.30 ರಂದು ಪಟ್ಟಣದ ಗಾಂಧಿಸ್ಮಾರಕ ಭವನದಲ್ಲಿ ಹಮ್ಮಿಕೊಂಡಿದೆ.ಗೋಷ್ಠಿಯನ್ನು ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಸು.ತ.ರಾಮೇಗೌಡ ಉದ್ಘಾಟಿಸಲಿದ್ದು, ಪರಿಷತ್ತಿನ ತಾಲೂಕು ಅಧ್ಯಕ್ಷ ಎಂ.ಶಿವಮಾದು ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಭೂಹಳ್ಳಿ ಪುಟ್ಟಸ್ವಾಮಿ, ರೈತಸಂಘದ ರಾಜ್ಯ ಕಾರ್ಯದರ್ಶಿ ಸಿ.ಪುಟ್ಟಸ್ವಾಮಿ, ಕಸಾಪ ನಿಕಟಪೂರ್ವ ಜಿಲ್ಲಾ ಅಧ್ಯಕ್ಷ ಬಿ.ಟಿ.ಚಿಕ್ಕಪುಟ್ಟೇಗೌಡ, ಪರಿಸರ ಚಿಂತಕ ನಾರಾಯಣ ತಿರುಮಳಾಪುರ, ಸಾಹಿತಿ ಮತ್ತೀಕೆರೆ ಚಲುವರಾಜು ಉಪಸ್ಥಿತರಿರುವರು.ಚರ್ಚಾಗೋಷ್ಠಿಯಲ್ಲಿ ಡಾ.ಬಿ.ಟಿ. ನೇತ್ರಾವತಿಗೌಡ, ಬೊಮ್ಮನಾಯಕನಹಳ್ಳಿ ಕೃಷ್ಣಪ್ಪ, ಡಾ.ಮಧುಸೂಧನಾಚಾರ್ಯ ಜೋಷಿ, ಡಾ.ಎಚ್. ಕೃಷ್ಣೇಗೌಡ, ಸಿ.ವಿ. ಶ್ರೀನಿವಾಸ್, ಸಿಂ.ಲಿಂ. ನಾಗರಾಜು ಸೇರಿ ಅನೇಕರು ಭಾಗವಹಿಸಲಿದ್ದಾರೆಂದು ರಾಮಕೃಷ್ಣಯ್ಯ ಬ್ರಹ್ಮಣೀಪುರ ತಿಳಿಸಿದ್ದಾರೆ.ಟಿ