ಚಿಂತಾಮಣಿಯಲ್ಲಿ ಮತದಾನ ಜಾಗೃತಿಗೆ ಜಾಥಾ
ಚಿಂತಾಮಣಿ: ನೂರಾರು ವಿದ್ಯಾರ್ಥಿಗಳ ಶುಕ್ರವಾರ ನಗರದಲ್ಲಿ ಮೆರವಣಿಗೆ ಮಾಡಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಿದರು. ನಗರದ ಪ್ರವಾಸಿ ಮಂದಿರದಿಂದ ವಿವಿಧ ಕಾಲೇಜು ನೂರಾರು ವಿದ್ಯಾರ್ಥಿಗಳು, ಚುನಾವಣೆಯಲ್ಲಿ ಕಡ್ಡಾಯವಾಗಿ ಪ್ರತಿಯೊಬ್ಬರು ಮತದಾನ ಮಾಡಿ, ಬಲಿಷ್ಠ ಭಾರತ ನಿರ್ಮಾಣಕ್ಕೆ ಕೈ ಜೋಡಿಸಲು ಮುಂದಾಗಬೇಕೆಂದು ಸಾರಿದರು. ಬಿಸಿಲಿನ ತಾಪದಲ್ಲಿಯೂ ವಿದ್ಯಾರ್ಥಿಗಳು ಮೆರವಣಿಗೆ ಮೂಲಕ ಅರಿವು ಮೂಡಿಸಿದರು. ನಂತರ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ದಂಡಾಧಿಕಾರಿ ಜಿ.ವಿ.ಹನುಮಂತರೆಡ್ಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡಬೇಕು. ಯಾವುದೇ ಆಮಿಷಗಳಿಗೆ ಬಲಿಯಾಗಬಾರದು ಎಂದು ಹೇಳಿದರು.