ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜೆಡಿಎಸ್ಗೆ ಅಭ್ಯರ್ಥಿಗಳ ಕೊರತೆ!

Rashmi Kasaragodu
Updated On : 29 Mar 2014, 2:14 am

ಬಾಗೇಪಲ್ಲಿ: ಚುನಾವಣೆಗೆ ಸ್ಪರ್ಧಿಸಲು ಜೆಡಿಎಸ್ಗೆ ಸೂಕ್ತ ಅಭ್ಯರ್ಥಿಗಳೇ ಸಿಕ್ಕಿಲ್ಲ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಅಭ್ಯರ್ಥಿ ಕೊರತೆಯಿಂದಾಗಿ ಸ್ವತಃ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಭ್ಯರ್ಥಿಯಾಗಿದ್ದಾರೆ ಎರ್ದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ಪಟ್ಟಣದ ಹೊರವಲಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿದ್ದರು. ವಿಧಾನಸಭಾ ಚುನಾವಣೆಯ ಸಮಯದಲ್ಲಿ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಶಾಸಕ ಸ್ಥಾನಕ್ಕೆ ನಿಂತು ಶಾಸಕರಾದರು. ಈಗ ಲೋಕಸಭಾ ಚುನಾವಣೆಗಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ನಿಂತಿದ್ದಾರೆ. ಆದರೆ ಅವರು ಈ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಅವರು ಗೆಲ್ಲಲು ಸಾಧ್ಯವಿಲ್ಲ ಎಂದರು.
ಚಿಕ್ಕಬಳ್ಳಾಪುರದಲ್ಲಿ ಎತ್ತಿನ ಹೊಳೆ ಯೋಜನೆ ಘೊಷಣೆ ಮಾಡಿದ ಸಂದರ್ಭದಲ್ಲಿ ಈ ಯೋಜನೆ ಸರಿಯಿಲ್ಲ. ಈ ಯೋಜನೆ ಮೊಯ್ಲಿ ಸ್ವಪ್ರತಿಷ್ಠೆಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಎತ್ತಿನ ಹೊಳೆ ಯೋಜನೆಯಿಂದ ಈ ಭಾಗದ ಜನರಿಗೆ ಕುಡಿಯಲು ನೀರು ಕೊಡಬೇಕೋ ಬೇಡವೋ ಎಂಬ ಕೇವಲ ಚರ್ಚೆ ನಡೆಸುತ್ತಿದ್ದರೆ ಜನರ ಸಮಸ್ಯೆಯನ್ನು ಬಗೆಹರಿಸುವವರು ಯಾರು? ಎಂದರು.
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ವೀರಪ್ಪ ಮೊಯ್ಲಿ, ಮಾಜಿ ಸಚಿವ ಸಿ.ಎಂ.ಇಬ್ರಾಹಿಂ, ಡಿ.ಕೆ ಶಿವಕುಮಾರ್ ಮಾತನಾಡಿದರು. ಗೃಹ ಸಚಿವ ಕೆ.ಜೆ.ಜಾರ್ಜ್, ಕೆ.ಎಚ್.ಮುನಿಯಪ್ಪ, ಶಿವಶಂಕರರೆಡ್ಡಿ, ರಾಮಲಿಂಗಾರೆಡ್ಡಿ, ರೋಷನ್ ಬೇಗ್, ಶ್ರಿನಿವಾಸಪುರ ಶಾಸಕ ರಮೇಶ್ ಕುಮಾರ್, ಮುಖಂಡರಾದ ಎಂ.ವಿ. ರಾಜಶೇಖರ್, ವಿ.ಆರ್.ಸುರ್ದಶನ್, ಮಾಜಿ ಶಾಸಕ ಎನ್.ಸಂಪಂಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು ಇದಕ್ಕೂ ಮುನ್ನ ಪಕ್ಷೇತರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿಗೆ ಪಕ್ಷದ ಬಾವುಟವನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಅಧ್ಯಕ್ಷ ಜಿ.ಪರಮೇಶ್ವರ್ ಪಕ್ಷಕ್ಕೆ ಬರಮಾಡಿಕೊಂಡರು.           

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement