ನನ್ನ ವಿರುದ್ಧ ನಾಯಕರ ಎತ್ತಿಕಟ್ಟಿದ ಮುನಿಯಪ್ಪ
ಚಿಂತಾಮಣಿ: ಜೆಡಿಎಸ್ ಅಭ್ಯರ್ಥಿ ಕೆ.ಕೇಶವ್ ಅವರನ್ನು ಬೆಂಬಲಿಸಿ ಕಾಂಗ್ರೆಸ್ನ ಕೆ.ಎಚ್.ಮುನಿಯಪ್ಪ ಅವರನ್ನು ಕಂಬದಹಳ್ಳಿಗೆ ಕಳುಹಿಸುವುದೇ ನಮ್ಮ ಗುರಿ ಎಂದು ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್ ಹೇಳಿದರು.
ನಗರದ ಮಾಳಪ್ಪಲ್ಲಿಯ ಅಂಜನಿ ನಿವಾಸದ ಬಳಿ ಶುಕ್ರವಾರ ಮಧ್ಯಾಹ್ನ ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, 'ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಕುಟುಂಬದ ಮೇಲೆ ಜನರು ಇಂದಿಗೂ ಸಹ ಪ್ರೀತಿ ವಿಶ್ವಾಸದಿಂದ ಇದ್ದಾರೆ' ಎಂದು ಹೇಳಿದರು. ಈ ಚುನಾವಣೆಯಲ್ಲಿ ಅದು ಹೇಗೆ ನೀವು ಗೆಲ್ಲುತ್ತೀರಿ ಎಂದು ನೋಡೋಣ ಎಂದು ಬಹಿರಂಗ ಸವಾಲು ಹಾಕಿದರು. ನಂತರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಚಿನ್ನಪ್ಪ, ವಿಧಾನಪರಿಷತ್ನ ಮಾಜಿ ಸದಸ್ಯ ಕೆ.ವಿ. ಸುಬ್ಬಾರೆಡ್ಡಿ ಮಾತನಾಡಿದರು.