ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕುಡಿಯುವ ನೀರಿಗೆ ಆಗ್ರಹಿಸಿ ಪುರಸಭೆಗೆ ಮುತ್ತಿಗೆ

Rashmi Kasaragodu
Updated On : 30 Mar 2014, 2:21 am

ಶಿಡ್ಲಘಟ್ಟ: ಪಟ್ಟಣದ 3 ನೇ ವಾರ್ಡ್ನ ಗೌಡರಬೀದಿ ನಾಗರಿಕರು ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಒತ್ತಾಯಿಸಿ ಖಾಲಿ ಬಿಂದಿಗೆಗಳೊಂದಿಗೆ ಪುರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಇದೇ ವಾರ್ಡ್ನಲ್ಲಿ ವಾಸವಿರುವ ಶಾಸಕ ಎಂ. ರಾಜಣ್ಣನವರಿಗೆ ಸಮಸ್ಯೆ ಹೇಳಿದರೆ ಶಾಸಕರ ಪತ್ನಿ ಉದಾಸೀನವಾಗಿ ಮಾತನಾಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಕ್ರಮ ನೀರಿನ ಸಂಪರ್ಕಗಳನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿದರಲ್ಲದೇ ಕುಡಿಯುವ ನೀರು ಪೂರೈಕೆ ಮಾಡದಿದ್ದರೆ ಮುಂದಿನ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಿದರು. ಪುರಸಭೆ ಮುಖ್ಯಾಧಿಕಾರಿ ರಾಮ್ಪ್ರಕಾಶ್ ಮಾತನಾಡಿ, ಆದಷ್ಟು ಬೇಗ ಸಮರ್ಪಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈ ಬಿಡಲಾಯಿತು. ಪುರಸಭೆ ಸದಸ್ಯ ಬಾಲಕೃಷ್ಣ, ಲಕ್ಷ್ಮಯ್ಯ, ರಘುನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement