ನಮೋ ಪ್ರಧಾನಿಯಾಗಲು ಬಿಜೆಪಿ ಬೆಂಬಲಿಸಿ
ಚಿಂತಾಮಣಿ: ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಸ್ಥಿತ್ವಕ್ಕೆ ಬರಲು ಹಾಗೂ ನರೇಂದ್ರಮೋದಿ ಪ್ರಧಾನಿಯಾಗಲು ಜನರು ನನಗೆ ಬಹುಮತ ನೀಡಬೇಕೆಂದು ಕೋಲಾರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಮನೆ ಮನೆಗೆ ತೆರಳಿ ಮತಯಾಚಿಸಿದರು.
ತಾಲೂಕಿನ ಚಿಲಕಲನೇರ್ಪು ಹೋಬಳಿ ಏನಿಗದೆಲೆ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಮನೆ ಮನೆಗೆ ತೆರಳಿ ನರೇಂದ್ರಮೋದಿ ಪ್ರಧಾನಿಯಾಗಲು ತನ್ನನ್ನು ಜಯಶಿಲರನ್ನಾಗಿ ಮಾಡಿ ಎಂದು ಕೋರಿದರು.
ಬಿಜೆಪಿ ಹಿರಿಯ ಮುಖಂಡ ಡಿ.ಆರ್. ಶಿವಕುಮಾರಗೌಡ ಮಾತನಾಡಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪೇಯಿ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳು ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಜನ ಗುರ್ತಿಸಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.