ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ ಅಸಿಂಧು
ಗುಡಿಬಂಡೆ: ಚುನಾಯಿತ ಪ್ರತಿನಿಧಿಗಳನ್ನು ಕಡೆಗೆಣಿಸಿ ನಾಮ ನಿರ್ದೇಶಿತ ಸದಸ್ಯರ ಜೊತೆ ಅಧ್ಯಕ್ಷರ ಅಯ್ಕೆ ಬಗ್ಗೆ ಸಭೆ ನಡೆಸಿ ನಿರ್ಣಯ ಕೈಗೊಂಡು ಜಿಲ್ಲಾ ಸಂಘದಿಂದ ಅನುಮೋದನೆ ಪಡೆದು ತಾಲೂಕು ಪ್ರಾ.ಶಾ.ಶಿಕ್ಷಕರ ಸಂಘದ ಘಟಕಕ್ಕೆ ಅಧ್ಯಕ್ಷರಾಗಿದ್ದ ಸಂಘದ ಪ್ರಧಾನ ಕಾರ್ಯದರ್ಶಿ ವಿ. ಶ್ರೀರಾಮಪ್ಪರ ಆಯ್ಕೆ ಅಸಿಂಧುವಾಗಿದೆಯೆಂದು ಸಂಘದ ಖಜಾಂಚಿ ಶ್ರೀರಾಮರೆಡ್ಡಿ ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, 27 ರಂದು ಸಂಘದ ಚುನಾಯಿತ ಪ್ರತಿನಿಧಿಗಳು, ನಾಮ ನಿರ್ದೇಶಿತ ಸದಸ್ಯರು ಸಭೆ ಸೇರಿ ಸಂಘದ ಉಪಾಧ್ಯಕ್ಷ ಬಾಲಾಜಿಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆಮಾಡಿ ನಿರ್ಣಯ ಕೈಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಪುರುಷೋತ್ತಮ, ಪ್ರಧಾನ ಕಾರ್ಯದರ್ಶಿಯಾಗಿ ವಿ. ಶ್ರೀರಾಮಪ್ಪ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಮನೋಜಮ್ಮ ಆಯ್ಕೆಯಾಗಿದ್ದಾರೆಂದು ಹೇಳಿದ್ದಾರೆ.