ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹ

Mainashree
Updated On : 2 May 2014, 11:39 am

ಕೋಲಾರ: ಜಿಲ್ಲೆಯಲ್ಲಿ ಎದುರಾಗಿರುವ ನೀರಿನ ಸಮಸ್ಯೆಯನ್ನು ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ದಲಿತ ಸಮಾಜ ಸೇನೆ ಜಿಲ್ಲಾಧಿಕಾರಿ ಮತ್ತು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ನಗರದಲ್ಲಿರುವ ಸಂಘದ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಂಸ್ಥಾಪಕ ಅಧ್ಯಕ್ಷ ಸೂಲಿಕುಂಟೆ ಆನಂದ್, ನೀರಿನ ಸಮಸ್ಯೆ ಇಷ್ಟು ಗಂಭೀರ ಸ್ವರೂಪ ಪಡೆದಿದ್ದರೂ ಜಿಲ್ಲೆಯಲ್ಲಿನ ಪ್ರತಿನಿಧಿಗಳು ನೀರಿನ ಬಗ್ಗೆ ಚಕಾರ ಎತ್ತಲು ಸಹ ಹಿಂದೇಟು ಹಾಕುತ್ತಿದ್ದು ಇದರ ಬಗ್ಗೆ ಕನಿಷ್ಠ ಕಾಳಜಿ ತೋರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅರೋಪಿಸಿದರು.
ಜನರಿಗೆ ಮತ್ತು ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ ಪರಿತಪಿಸುವಂತಾಗಿದೆ. ಸಲದಕ್ಕೆ ವಿದ್ಯುತ್ ಸಮಸ್ಯೆ ಬೇರೆ ಹೀಗೆ ಮುಂದುವರೆದರೆ ಕುಡಿಯಲು ನೀರಿಲ್ಲದೆ ಪ್ರಾಣ ಹೋಗುವ ದಿನಗಳು ಹತ್ತರಲ್ಲಿರುವುದರಿಂದ ಜಿಲ್ಲಾಧಿಕಾರಿಗಳು ಮತ್ತು ಸರ್ಕಾರ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಂಡು ಅನುಕೂಲ ಮಾಡಿಕೊಡಬೇಕೆಂದು ಸಮಿತಿಯ ಒತ್ತಾಯವಾಗಿದೆ. ಎ.ಎಲ್.ಎನ್. ಸ್ವಾಮಿ, ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್ , ಕಾರ್ಯಾಧ್ಯಕ್ಷ ಹುಣಸನಹಳ್ಳಿ ರಮೇಶ್, ದೇವಗಾನಹಳ್ಳಿ ಯತೀಶ್, ನಾಗೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement