ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಸರ್ಕಾರದ ಸವಲತ್ತು ಜನರಿಗೆ ತಲುಪಲಿ

Mainashree
Updated On : 2 May 2014, 11:58 am

ಕೋಲಾರ: ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಹಾಗೂ ಸವಲತ್ತುಗಳನ್ನು ಬಡವರಿಗೆ ತಲುಪಿಸುವ ಜವಾಬ್ದಾರಿ ಸ್ವಯಂ ಸೇವಾ ಸಂಸ್ಥೆಗಳ ಮೇಲಿದೆ ಎಂದು ಪ್ರಧಾನ ಹಿರಿಯ ಸಿವಿಲ್‌ನ್ಯಾಯಾಧೀಶರಾದ ಮಲ್ಲಿಕಾರ್ಜುನ ಕಿಣಿಕೇರಿ ಅಭಿಪ್ರಾಯಪಟ್ಟರು.
ನಗರದ ಗೌರಿಪೇಟೆಯ ಅಕ್ಷಯ ನರ್ಸಿಂಗ್ ಹೋಂ ಮುಂಭಾಗ ಶುಕ್ರವಾರ ಜಾಗೃತಿ ಸೇವಾ ಸಂಸ್ಥೆಯ ಯೋಜನಾ ಕಚೇರಿ ಉದ್ಘಾಟಿಸಿ ಅವರು ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಅನೇಕರಿಗೆ ಅರಿವೂ ಇಲ್ಲವಾಗಿರುವುದರಿಂದ ಬಡವರ ಸವಲತ್ತುಗಳು ಬೇರೆಯವರ ಪಾಲಾಗುತ್ತಿರುವುದರಿಂದ ಸ್ವಯಂ ಸೇವಾ ಸಂಸ್ಥೆಗಳು ಜನತೆಯಲ್ಲಿ ಅರಿವು ಮೂಡಿಸಬೇಕೆಂದರು.
ಪ್ರಧಾನ ಕಿರಿಯ ಸಿವಿಲ್‌ನ್ಯಾಯಾಧೀಶರಾದ ಕೆಂಗಬಾಲಯ್ಯ, ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಜನರಿಗೆ ತಲುಪಿಸುವ ಕಾರ್ಯದಲ್ಲಿ ವಕೀಲ ಧನರಾಜ್ ಸ್ಥಾಪಿಸಿರುವ ಜಾಗೃತಿ ಸೇವಾ ಸಂಸ್ಥೆ ಕಾರ್ಯನಿರ್ವಹಿಸಲಿ ಎಂದು ಹಾರೈಸಿದರು.
ಡಿವೈಎಸ್‌ಪಿ ಅಶೋಕ್ ಕುಮಾರ್, ಸಮಾಜದಲ್ಲಿ ಬಡವರು ಬಡವರಾಗಿಯೇ, ಶ್ರೀಮಂತರು ಶ್ರೀಮಂತರಾಗಿಯೇ ಮುಂದುವರೆಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ವಿಷಾದಿಸಿದರು. ಶಿಕ್ಷಣ, ಸಂಘಟನೆಯಿಂದ ಸರ್ಕ್ಕಾರದ ಸವಲತ್ತು ಪಡೆದು ಆರ್ಥಿಕ ಸಬಲತೆ ಸಾಧಿಸಬೇಕೆಂದು ಕೋರಿದ ಅವರು, ಸಮಾಜಕ್ಕೆ ಕೊಡುಗೆ ನೀಡುವ ಶಕ್ತಿ ಬೆಳೆಸಿಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲ ಕೆ.ಆರ್. ಧನರಾಜ್ ಸ್ವಾಗತಿಸಿ, ಸಂಸ್ಥೆ ಈಗಾಗಲೇ ಕಾರ್ಮಿಕರಿಗೆ ಗುರುತಿನ ಚೀಟಿ, ನೋಂದಣಿ, ಆರೋಗ್ಯ ವಿಮೆ, ರಾಷ್ಟ್ರೀಯ ಪಿಂಚಣಿ ಯೋಜನೆ ಅನುಷ್ಠಾನದಂತಹ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ ಎಂದು ತಿಳಿಸಿದರು. ಸಂಸ್ಥೆ ಯೋಜನಾಧಿಕಾರಿ ವಿಜಯಕುಮಾರ್, ಕಾರ್ಯದರ್ಶಿ ವಿಠಲ್ ಕೃಷ್ಣಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement