ಅಕ್ರಮ ಮದ್ಯ ಮಾರಾಟ: ಪ್ರತಿಭಟನೆ
ಬಂಗಾರಪೇಟೆ: ತಾಲೂಕಿನ ಪ್ರತಿ ಹಳ್ಳಿಯಲ್ಲಿಯೂ ಅನಧಿಕೃತವಾಗಿ ಪೆಟ್ಟಿಗೆ ಅಂಗಡಿಗಳು ಹಾಗೂ ಟೀ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಆದರೂ ಅಬಕಾರಿ ಇಲಾಖೆ ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ರೈತ ಸಂಘದ ಕಾರ್ಯಕರ್ತರು ಆರೋಪಿಸಿದ್ದಾರೆ.
ಪಟ್ಟಣದ ಅಬಕಾರಿ ಕಚೇರಿ ಎದುರು ರೈತರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಕ್ರಮ ಮದ್ಯ ಮಾರಾಟದಿಂದಾಗಿ ಹಳ್ಳಿಗಳ ವಾತಾವರಣ ಸಂಪೂರ್ಣವಾಗಿ ಬದಲಾಗಿದೆ. ಅನೇಕ ಸಂಸಾರಗಳು ಬೀದಿಪಾಲಾಗುತ್ತಿವೆ. ಗ್ರಾಮಗಳಲ್ಲಿ ಅನಧಿಕೃತ ಮದ್ಯ ಅಂಗಡಿಗಳನ್ನು ತಡೆಯಬೇಕು. ಇಲ್ಲದಿದ್ದರೆ ನಾನು ಸಾಮೋಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳಬೇಕಾದಿತು ಎಂದು ನೂರಾರು ಮಹಿಳೆಯರು ಇತ್ತೀಚಿಗೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ರವರಿಗೆ ಮನವಿ ಸಲ್ಲಿಸಿದ್ದರು. ಆದರೆ, ಈ ಬಗ್ಗೆ ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದರು. ಕೂಡಲೇ ಹಳ್ಳಿಗಳಿಗೆ ಭೇಟಿ ನೀಡಿ, ಅನಧಿಕೃತ ಮದ್ಯದ ಅಂಗಡಿಗಳನ್ನು ಮುಚ್ಚಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಮರಗಲ್ ಶ್ರೀನಿವಾಸ್, ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಐತಾಂಡಹಳ್ಳಿ ಉದಯ್, ರತ್ನಮ್ಮ, ಭಾಗ್ಯಮ್ಮ, ಪಾಪಕ್ಕೆ, ಮುನಿವೆಂಕಟಮ್ಮ, ತಿಮ್ಮಕ್ಕ ಸೇರಿದಂತೆ ಅನೇಕರಿದ್ದರು.