ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕರವೇಯಿಂದ ಶೀಘ್ರವೇ ಪ್ರಾದೇಶಿಕ ಪಕ್ಷ ಸ್ಥಾಪನೆ

Srinivasa Murthy VN
Updated On : 9 May 2014, 12:16 pm

ಕೋಲಾರ: ಕನ್ನಡ ನೆಲ-ಜಲ ಹಾಗೂ ರಾಜ್ಯದ ಸ್ವಾಭಿಮಾನ ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಪ್ರದೇಶಿಕ ರಾಜಕೀಯ ಪಕ್ಷವನ್ನು ಸ್ಥಾಪಿಸುವುದು ಪ್ರಸ್ತುತವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ವೇಡಿಹಾಳ ಎಂ.ಕೆ. ರಾಘವೇಂದ್ರ ಹೇಳಿದರು.
ನಗರದ ಪತ್ರಕರ್ತರ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ  ಅವರು ಮಾತನಾಡುತ್ತಿದ್ದರು.
ಕ.ರ.ವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷ ಸ್ಥಾಪನೆ ಶೀಘ್ರವಾಗಿ ನಡೆಯಲಿದೆ ಎಂದ ಅವರು ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಹಿತ ಕಾಪಾಡಲು ಸಾಧ್ಯವಿಲ್ಲದ ಕಾರಣ ಕರವೇ ನೇತೃತ್ವದಲ್ಲಿ ಪ್ರಾದೇಶಿಕ ಪಕ್ಷ ಸ್ಥಾಪನೆಗೆ ಪ್ರಯತ್ನ ನಡೆಯುತ್ತಿದೆ ಎಂದರು.
ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ ಹುಟ್ಟುಹಬ್ಬವನ್ನು ಜೂ.10 ರಂದು ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಜಿಲ್ಲೆಗಳಲ್ಲಿ ರಕ್ತದಾನ ಶಿಬಿರಗಳನ್ನು ಮಾಡುವ ಮೂಲಕ ಆಚರಿಸಲಾಗುವುದು ಎಂದು ತಿಳಿಸಿದರು.
ಈ ಸಮಾವೇಶದಲ್ಲಿ ಬಡಗಿ ಶ್ರೀನಿವಾಸ್, ಹೆಚ್.ವೈ. ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಮುನಿಸ್ವಾಮಿ, ಭದ್ರಪ್ಪ, ಜಿಲ್ಲಾ ಕಾರ್ಯದರ್ಶಿ ಎಸ್.ಎಂ ರಾಜು, ಮಾಲೂರು ಮುರಳಿಧರ್, ಪ್ರಭಾಕರ್, ಮಹಿಳಾ ಮುಖಂಡರಾದ ಲತಾಭಾಯಿ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement