ಬಿಜಿಎಸ್ ವಿದ್ಯಾಸಂಸ್ಥೆಗೆ ಶೇ.85.22
ಮಾಲೂರು: ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಬಿ.ಜಿ.ಎಸ್. ವಿದ್ಯಾಸಂಸ್ಥೆ ಶೇ.85.22 ರಷ್ಟು ಫಲಿತಾಂಶ ಬಂದಿದೆ.
ಈ ಶೈಕ್ಷಣಿಕ ವರ್ಷದಲ್ಲಿ 88 ವಿದ್ಯಾರ್ಥಿಗಳ ದ್ವಿತೀಯ ಪಿಯುಸಿ ಪರೀಕ್ಷೆ ತೆಗೆದುಕೊಂಡಿದ್ದು, ಅದರಲ್ಲಿ 75 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಅತ್ಯುನ್ನತ ಶ್ರೇಣಿ ಸೇರಿದಂತೆ 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂಇಬ್ಬರು ದ್ವಿತೀಯಯ ಶ್ರೇಣಿಯಲ್ಲಿ ಪಾಸಾಗುವ ಮೂಲಕ ಶೇ.70.27 ಹಾಗೂ 36 ಪ್ರಥಮ,09 ದ್ವಿತೀಯ ಶ್ರೇಣಿಯಲ್ಲಿ ಪಾಸಾಗುವ ಮೂಲಕ ವಾಣಿಜ್ಯ ವಿಭಾಗದಲ್ಲಿ ಶೇ.96.08 ಫಲಿತಾಂಶ ಪಡೆದಿದೆ. ವಿಜ್ಞಾನ ವಿಭಾಗದಲ್ಲಿ ಅದೃಷ್ಟವಂತ ಎಂಬ ವಿದ್ಯಾರ್ಥಿ531(ಶೇ.88.5)ಅಂಕ ಪಡೆದಿದ್ದು, ವಾಣಿಜ್ಯ ವಿಭಾಗದಲ್ಲಿ ಕುಮಾರ್ ಕೆ.534(ಶೇ.89),ಸೌಮ್ಯ ಎಸ್.523(ಶೇ.87.17) ಶುಭ ಶಂಕರ್ ಎನ್.520(ಶೇ.86.17)ಅಭಿನಯ್ ಎಂ.515(ಶೇ.86.17)ಅಂಕ ಪಡೆದು ಕಾಲೇಜಿಗೆ ಹಾಗೂ ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ವಿದ್ಯಾರ್ಥಿಗಳು ಅಭಿನಂದಿಸಿರುವ ಕಾಲೇಜು ಪ್ರಾಂಶುಪಾಲ ರಾಮಕೃಷ್ಣಪ್ಪ ತಿಳಿಸಿದ್ದಾರೆ.