ಗಂಡನ ಕಾಟಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡು ಪತ್ನಿ ಸಾವು
ಚಿಂತಾಮಣಿ: ಗಂಡನ ದೈಹಿಕ ಮತ್ತು ಮಾನಸಿಕ ಕಿರುಕುಳ ತಾಳಲಾರದೇ ಗೃಹಿಣಿಯೊಬ್ಬಳು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಎಂ.ಗೊಲ್ಲಹಳ್ಳಿ ಗ್ರಾಮದಿಂದ ವರದಿಯಾಗಿದೆ. ಶಿಡ್ಲಘಟ್ಟ ತಾಲ್ಲೂಕಿನ ಕೊಂಡರಾಜನಹಳ್ಳಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ರತ್ನಮ್ಮ(35) ಆತ್ಮಹತ್ಯೆ ಮಾಡಿಕೊಂಡವರು. ಏಪ್ರಿಲ್ 4ರಂದು ಈಕೆ ಬೆಂಕಿ ಹಚ್ಚಿಕೊಂಡಿದ್ದಳು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ಅಸನೀಗಿದ್ದಾರೆ.
ತಲೆಮರೆಸಿಕೊಂಡಿರುವ ಆರೋಪಿ: ಎಂ.ಗೊಲ್ಲಹಳ್ಳಿ ಗ್ರಾಮದಿಂದ ರಾತ್ರೋರಾತ್ರಿ ಪತ್ನಿ ಸಾವಿನ ಸುದ್ದಿ ತಿಳಿದ ತಕ್ಷಣ ಗಂಡ ಕೃಷ್ಣಪ್ಪ ಸೇರಿದಂತೆ ಇನ್ನೂ ಹಲವರು ತಲೆಮರೆಸಿಕೊಂಡಿರುವುದಾಗಿ ಪೋಲೀಸರು ತಿಳಿಸಿದ್ದಾರೆ.