ಅರಾಭಿಕೊತ್ತನೂರು ಸರ್ಕಾರಿ ಶಾಲೆಗೆ ಶೇ.91.66
ಕೋಲಾರ: ತಾಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.91.66 ರಷ್ಟು ಫಲಿತಾಂಶ ಲಭ್ಯವಾಗಿದೆ ಎಂದು ಶಾಲೆಯ ಮುಖ್ಯ ಶಿಕ್ಷಕ ಸಿ.ಎಂ. ವೆಂಕಟರಮಣಪ್ಪ ತಿಳಿಸಿದ್ದಾರೆ. ಪರೀಕ್ಷೆಗೆ ಕುಳಿತ 48 ವಿದ್ಯಾರ್ಥಿಗಳ ಪೈಕಿ 44 ಮಂದಿ ತೇರ್ಗಡೆಯಾಗಿದ್ದು, ಇವರಲ್ಲಿ ಪ್ರಥಮ ಶ್ರೇಣಿ-9, ದ್ವಿತೀಯ ಶ್ರೇಣಿ-11 ಹಾಗೂ ತೃತೀಯ ಶ್ರೇಣಿಯಲ್ಲಿ 24 ಮಂದಿ ತೇರ್ಗಡೆಯಾಗಿದ್ದಾರೆ. ಶಾಲೆಯಲ್ಲಿ ಜಿ.ಕೋಮಲ-515 ಎನ್.ರಂಜಿತಾ-504 ಅಂಕ, ಎಲ್. ಮೇಘನಾ-479 ಹಾಗೂ ವಿ.ಗಾಯತ್ರಿ-478 ಅಂಕಗಳಿಸಿ ಸಾಧನೆ ಮಾಡಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಂಜುಂಡೇಗೌಡ ಹಾಗೂ ಸದಸ್ಯರು ಅಭಿನಂದನೆ ತಿಳಿಸಿದ್ದಾರೆ.