ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಜಿಂಕೆಗಳ ಹಾವಳಿ: ರೈತರು ಕಂಗಾಲು

Rashmi Kasaragodu
Updated On : 15 May 2014, 1:04 am

ಬಂಗಾರಪೇಟೆ: ಜಿಂಕೆಗಳ ಹಾವಳಿಯಿಂದ ಲಕ್ಷಾಂತರ ರುಪಾಯಿ ಬಂಡವಾಳ ಹಾಕಿರುವ ರೈತರ ಬೆಳೆಗಳು ನಾಶವಾಗಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ಅರಣ್ಯ ಇಲಾಖೆ ರೈತರ ಬೆಳೆಗಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಕಸಬಾ ಹೋಬಳಿಯ ಮರಗಲ್ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿಗೆ ಜಿಂಕೆಗಳು ಹೆಚ್ಚಾಗಿ ದಾಳಿ ಮಾಡಿ ರೈತ ಬೆಳೆಗಳನ್ನು ನಾಶಪಡಿಸುತ್ತಿವೆ. ಇದರಿಂದ ಇಳುವರಿಗೆ ಬಂದಿರುವ ಫಸಲನ್ನು ಸಂಪೂರ್ಣವಾಗಿ ನಾಶವಾಗುತ್ತಿದೆ. ಮೊದಲೇ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.ಫಸಲಿನ ಮೇಲೆ ಕ್ರಿಮಿನಾಶಕ ಔಷಧಿಗಳನ್ನು ಸಿಂಪಡಿಸಿರುವ ಪರಿಣಾಮ ಜಿಂಕೆಗಳಿಗೆ ಪ್ರಾಣ ಹಾನಿಯಾಗಲಿದೆ ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಮರಗಲ್ ಮಿಲ್ಟ್ರಿ ಶ್ರೀನಿವಾಸ್ ಆತಂಕ ವ್ಯಕ್ತಪಡಿಸಿದ್ದಾರೆ.
ಟೊಮೇಟೊ, ಮೆಣಸಿನಗಿಡ, ಬಿನ್ಸ್, ಕೊತ್ತಂಬರಿ ಬೆಳೆಗಳನ್ನು ನೂರಾರು ಜಿಂಕೆಗಳು ಹಿಂಡಾಗಿ ಬರುತಿದ್ದು, ಬೆಳೆಯನ್ನು ನಾಶಪಡಿಸುತ್ತಿವೆ. ಈ ಬಗ್ಗೆ ಅರಣ್ಯಾಧಿಕಾರಿಗಳ ಗಮನಕ್ಕೆ ತಂದರೆ ಬರೀ ನೆಪಕ್ಕೆ ಮಾತ್ರ ಗ್ರಾಮಗಳಿಗೆ ಭೇಟಿ ನೀಡುವರೆ ವಿನಾ ಯಾವುದೇ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement