ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮತ ಎಣಿಕೆ ಕೇಂದ್ರದ ಬಳಿ ಬಿಗಿ ಬಂದೋಬಸ್ತ್

Rashmi Kasaragodu
Updated On : 16 May 2014, 1:47 am

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯುವ ಸರ್ಕಾರಿ ಬಾಲಕರ ಕಾಲೇಜಿಗೆ ಎಲ್ಲಾ ರೀತಿಯ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಮತ ಎಣಿಕಾ ಕೇಂದ್ರ, ಕಾಲೇಜಿನ ಹೊರಗಡೆ ಹಾಗೂ ನಗರದ ವಿವಿಧ ಕಡೆಗಳಲ್ಲಿ ಬಂದೋಬಸ್ತ್ ಕಾರ್ಯಕ್ಕೆ ನಿಯೋಜನೆಗೊಂಡಿರುವ ಪೊಲೀಸರು ಗುರುವಾರ ಹಿರಿಯ ಅಧಿಕಾರಿಗಳ ಮುಂದೆ ಹಾಜರಾಗಿ ತಮಗೆ ನಿಗದಿಯಾಗಿರುವ ಸ್ಥಳದ ಮಾಹಿತಿ ಪಡೆದರು.
ಸಂಚಾರ ನಿಯಂತ್ರಣಕ್ಕಾಗಿ ವಿವಿಧ ಕಡೆ ಸಂಚಾರಿ ಪೊಲೀಸರನ್ನು ಸಹ ನಿಯೋಜಿಸಲಾಗಿದೆ. ಎಸ್ಪಿ ಅಜಯ್ ಹಿಲೋರಿ, ಎಸ್ಪಿ ಜಮೀಲ್, ಡಿವೈಎಸ್ಪಿ ಅಶೋಕ್‌ಕುಮಾರ್ ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಸುಮಾರು 300ಕ್ಕೂ ಹೆಚ್ಚು ಪೊಲೀಸರು, ಗೃಹ ರಕ್ಷಕ ದಳ ಸಿಬ್ಬಂದಿಯನ್ನು ಭದ್ರತಾ ವ್ಯವಸ್ಥೆಗಾಗಿ ನಿಯೋಜಿಸಲಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement